ಕುಂದಗೋಳ : ತಾಲೂಕಿನ ಸಂಶಿ ಗ್ರಾಮದ ಬಿಜೆಪಿ ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಬಸವರಾಜ ಕುಂದಗೋಳಮಠ ಅವರ 55ನೇ ವರ್ಷದ ಜನ್ಮದಿನದ ಅಂಗವಾಗಿ ಕುಂದಗೋಳ ತಾಲೂಕ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ಬ್ರೇಡ್ ವಿತರಣೆ ಮಾಡಲಾಯಿತು.
ಹೌದು ! ಬಿಜೆಪಿ ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಬಸವರಾಜ ಕುಂದಗೋಳಮಠ ಅಭಿಮಾನಿ ಬಳಗದವರು ಹಾಗೂ ಬಿಜೆಪಿ ಕಾರ್ಯಕರ್ತರು ತಾಲೂಕ ಆಸ್ಪತ್ರೆ ರೋಗಿಗಳ ಯೋಗ ಕ್ಷೇಮ ವಿಚಾರಿಸಿ, ಜನ್ಮದಿನದ ಹಿನ್ನೆಲೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಿ ಸಾಮಾಜಿಕ ಕಳಕಳಿ ಮೆರೆದರು. ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಿದ ಕಾರ್ಯಕರ್ತರಿಗೆ ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿಗಳು ಅಭಿನಂದನೆ ತಿಳಿಸಿದರು.
Kshetra Samachara
17/02/2022 01:44 pm