ಧಾರವಾಡ: ಕಾಲೇಜುಗಳು ಕೇವಲ ಶೈಕ್ಷಣಿಕ ಚಟುವಟಿಕೆ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕ್ರೀಡಕೂಟಗಳಿಗೆ ಮಾತ್ರ ಸೀಮಿತವಾಗಬಾರದು ಎಂಬುದನ್ನು ಧಾರವಾಡದ ಶ್ರೀ ಸಾಯಿ ಪದವಿಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ತೋರಿಸಿಕೊಟ್ಟಿದೆ.
ಸಾಕಷ್ಟು ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡಿರುವ ಕಾಲೇಜು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಧಾರವಾಡದ ಶ್ರೀರಾಮನಗರದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿತ್ತು.
ಶ್ರೀ ಸಾಯಿ ಕಾಲೇಜು, ಹೊಂಬೆಳಕು ಪ್ರತಿಷ್ಠಾನ, ತಾಲೂಕಾ ಆರೋಗ್ಯ ಕೇಂದ್ರ, ಡಾ.ಅಗರವಾಲ್ಸ್ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಸುಮಾರು 200ಕ್ಕೂ ಅಧಿಕ ಜನ ಆರೋಗ್ಯ ಹಾಗೂ ಉಚಿತ ಕಣ್ಣಿನ ತಪಾಸಣೆ ನಡೆಸಲಾಯಿತು.
ಡಾ.ವೀಣಾ ಬಿರಾದಾರ, ಶ್ರೀಸಾಯಿ ಕಾಲೇಜಿನ ಪ್ರಾಚಾರ್ಯ ಪ್ರೊ.ನಾಗರಾಜ ಶಿರೂರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಶ್ರೀರಾಮನಗರ, ಜಾಂಬವಂತನಗರ, ಅತ್ತಿಕೊಳ್ಳ ನಗರ ಮುಖಂಡರು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
Kshetra Samachara
14/04/2022 08:53 pm