ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ವಿಶ್ವ ತಂಬಾಕು ನಿಷೇಧ ದಿನಾಚರಣೆ

ಅಣ್ಣಿಗೇರಿ: ಮೇ 31 ವಿಶ್ವ ತಂಬಾಕು ನಿಷೇಧ ದಿನ ಆಚರಣೆ ಅಂಗವಾಗಿ ಪಟ್ಟಣದ ಶ್ರೀ ಅಮೃತೇಶ್ವರ ಸಂಯುಕ್ತ ಪದವಿಪೂರ್ವ ಶಾಲಾ ಮತ್ತು ಕಾಲೇಜಿನಲ್ಲಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರ ತಂಬಾಕು ಸೇವನೆಯಿಂದ ಮನುಷ್ಯನ ಮೇಲೆ ಉಂಟು ಮಾಡುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಪ್ರಾಥಮಿಕ ಆರೋಗ್ಯ ಕೇಂದ್ರದ ಬಂದ ಆರೋಗ್ಯ ಅಧಿಕಾರಿಗಳು ಮಕ್ಕಳಿಗೆ ತಂಬಾಕು ಸೇವನೆಯಿಂದ ಯುವಕರ ಮೇಲೆ ಯಾವ ಪರಿಣಾಮ ಬೀರುತ್ತಿದೆ ಎಂಬುದರ ಬಗ್ಗೆ ಮನವರಿಕೆ ಮಾಡಿದರು. ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ತಂಬಾಕು ವ್ಯಸನಮುಕ್ತ ಕೇಂದ್ರಗಳನ್ನು ತೆರೆಯಲಾಗಿದ್ದು, ವೈಯಕ್ತಿಕ ಮತ್ತು ಕೌಟುಂಬಿಕ ಆಪ್ತ ಸಮಾಲೋಚನೆ ನೀಡಲಾಗುತ್ತದೆ. ಸ್ವಯಂ ಪ್ರೇರಿತ ತಂಬಾಕು ಬಿಡುವವರಿಗೆ ಇದೊಂದು ಸುವರ್ಣ ಅವಕಾಶ ಎಂದರು.

ಇನ್ನೂ ಈ ವೇಳೆ ಶಾಲೆಯ ಮುಖ್ಯೋಪಾಧ್ಯಾಯರು ಶಿಕ್ಷಕ-ಶಿಕ್ಷಕಿಯರು ಮಕ್ಕಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

31/05/2022 04:44 pm

Cinque Terre

9.06 K

Cinque Terre

0

ಸಂಬಂಧಿತ ಸುದ್ದಿ