ಅಣ್ಣಿಗೇರಿ: ಬಕ್ರೀದ್ ಹಬ್ಬದ ನಿಮಿತ್ಯ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಧ್ಯಪಾನ ಮಾರಾಟ ಹಾಗೂ ಮಧ್ಯ ಸಾಗಾಣಿಕೆಯನ್ನು ನಿಷೇಧ ಮಾಡಲಾಗಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆ ಸೇರಿದಂತೆ ಪಟ್ಟಣ ಹಾಗೂ ತಾಲೂಕಿನಲ್ಲಿ ಮದ್ಯ ಮಾರಾಟ ಮತ್ತು ಸಾಗಾಣಿಕೆ ಮೇಲೆ ಜುಲೈ 9 ರ ರಾತ್ರಿ 11:59 ಗಂಟೆಯಿಂದ ಜುಲೈ 11 ರ ಬೆಳಿಗಿನ 6 ಗಂಟೆಯವರೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿ ಹೊರತುಪಡಿಸಿ ಧಾರವಾಡ ಜಿಲ್ಲಾಯಾದ್ಯಂತ ಮದ್ಯಾಪಾನ, ಮದ್ಯ ಮಾರಾಟ ಮತ್ತು ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.
Kshetra Samachara
07/07/2022 12:21 pm