ಅಣ್ಣಿಗೇರಿ: ವಿಶ್ವ ಜನಸಂಖ್ಯಾ ದಿನಾಚರಣೆಯ ಅಂಗವಾಗಿ ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸಸಿಗೆ ನೀರುಣಿಸುವ ಮೂಲಕ ವಿಶ್ವಜನಸಂಖ್ಯಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ಪಟ್ಟಣದ ಆರೋಗ್ಯ ಕೇಂದ್ರದ ಆರೋಗ್ಯ ಶಿಕ್ಷಣಾಧಿಕಾರಿಗಳು ಹಾಗೂ ಹಿರಿಯ ಆರೋಗ್ಯ ನಿರೀಕ್ಷಕರು ಶೋಭಾ ಕುಲಕರ್ಣಿ ಮತ್ತು ಎಂ ಎ ತಹಸೀಲ್ದಾರ್ ಅವರು ಸಾರ್ವಜನಿಕರಿಗೆ ಜನಸಂಖ್ಯೆ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಪ್ರಮಾಣ ವಚನ ಬೋಧನೆ ಮಾಡಿಸಿದರು.
ಅದೇ ರೀತಿ ತಾಲೂಕಿನ ಭದ್ರಾಪುರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಸಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದಲ್ಲಿ PHCO ರಶ್ಮಿ ನಾಗನೂರು ಹಾಗೂ CHO ಪ್ರೀತಂ ಕದಡಿ ಆಗಮಿಸಿ ಜನಸಂಖ್ಯೆ ಏರಿಕೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.
ಇನ್ನೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪರಮೇಶ್ವರ ಗುಡಿಸಲಮನೆ ಮುಖ್ಯ ಅತಿಥಿಗಳಾಗಿ ಹನುಮಂತಪ್ಪ, ಕವಿತಾ, ಲಕ್ಷ್ಮವ್ವ ಭಜಂತ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ CHO ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
Kshetra Samachara
11/07/2022 06:03 pm