ಅಣ್ಣಿಗೇರಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕ್ಷೇತ್ರ ಸಂಪನ್ಮೂಲ ಕೇಂದ್ರ ನವಲಗುಂದ ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಮಾದರಿ ಕೇಂದ್ರ ಶಾಲೆ ನಲವಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ನಲವಡಿ ಕ್ಲಸ್ಟರ್ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ನಲವಡಿ ಗ್ರಾಮದಲ್ಲಿ ಜರುಗಿದವು.
ಕ್ರೀಡಾಕೂಟವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಹಾಚಾರ್ಯ, ದೈಹಿಕ ಶಿಕ್ಷಕ ಪರಿವೀಕ್ಷಕರು ಮತ್ತು ಸಂಪನ್ಮೂಲ ವ್ಯಕ್ತಿ ಸಮೂಹ ಸಂಪನ್ಮೂಲ ಕೇಂದ್ರ ನಲವಡಿ ಹಾಗೂ ಶಾಲೆಯ ಪ್ರಧಾನ ಗುರುಗಳು ಉದ್ಘಾಟನೆ ಮಾಡಿದರು.
ಕ್ರೀಡಾಕೂಟ ಸ್ಪರ್ಧೆಯಲ್ಲಿ ಹಲವಾರು ಶಾಲೆಯ ಮಕ್ಕಳು ಹಾಗೂ ದೈಹಿಕ ಶಿಕ್ಷಕರು ಸೇರಿದಂತೆ ಅನೇಕ ಶಿಕ್ಷಕರು ಉಪಸ್ಥಿತರಿದ್ದು, ತಮ್ಮ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಹುರಿದುಂಬಿಸುವ ಚಿತ್ರಗಳು ಕಂಡುಬಂದವು.
Kshetra Samachara
28/07/2022 10:24 am