ಅಣ್ಣಿಗೇರಿ: ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಯಿಂದ ರೈತರು ಸೇರಿದಂತೆ ಸಾರ್ವಜನಿಕರ ಪಾಡು ಹೇಳತೀರದಷ್ಟು ಆಗಿದೆ. ತಾಲೂಕಿನ ನಾವಳ್ಳಿ ಗ್ರಾಮದಲ್ಲಿ ಸುರಿದ ಮಳೆಯಿಂದಾಗಿ ರೈತರ ಜಮೀನುಗಳಿಗೆ ನುಗ್ಗಿ ಭಾರೀ ಪ್ರಮಾಣದ ಬೆಳೆ ಹಾನಿ ಸಂಭವಿಸಿದೆ.
ರೈತ ಬೆಳೆದ ಈರುಳ್ಳಿ, ಹತ್ತಿ, ಗೋವಿನ ಜೋಳ, ಹೆಸರಿನ ಬೆಳೆಗಳು ಸಂಪೂರ್ಣವಾಗಿ ಜಲಾವೃತವಾಗಿದೆ. ವಾಡಿಕೆಗಿಂತ ಹೆಚ್ಚಿನ ಮಳೆಯಾಗಿ ಹಳ್ಳ ಹಾಗೂ ಸರುವುಗಳಿಂದ ಬಂದ ನೀರು ಹೊಲಗಳಿಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದೆ.
ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಳ್ಳದ ನೀರು ಮತ್ತು ಸರುವುಗಳಿಂದ ಬರುವ ನೀರಿಗೆ ತಡೆಗೋಡೆ ನಿರ್ಮಿಸಿ ಮತ್ತು ಈಗಾಗಿರುವ ಸಮಸ್ಯೆಗೆ ಪರಿಹಾರ ಒದಗಿಸಬೇಕೆಂದು ರೈತರು ಒತ್ತಾಯಿಸುತ್ತಿದ್ದಾರೆ.
Kshetra Samachara
03/08/2022 09:01 pm