ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: 'ಮಳೆಯಿಂದ ಸೂರು ಕಳೆದುಕೊಂಡವರಿಗೆ ಪರಿಹಾರ ನೀಡಿ'

ಅಣ್ಣಿಗೇರಿ: ತಾಲೂಕಿನ ಭದ್ರಾಪುರ ಗ್ರಾಮದಲ್ಲಿ ಮೊನ್ನೆ ಸುರಿದ ಭಾರಿ ಮಳೆಗೆ ಗ್ರಾಮದ ರೈತರಾದ ಪರಸಪ್ಪ ಭೀಮಪ್ಪ ತೋಟಗಾರ ಎಂಬುವರ ಮನೆ ಸಂಪೂರ್ಣವಾಗಿ ಬಿದ್ದು ಹಾಳಾಗಿದೆ.

ಇನ್ನೂ ಸೂರು ಕಳೆದುಕೊಂಡವರ ಮನೆಗೆ ಭೇಟಿ ನೀಡಿದ ಧಾರವಾಡ ಜಿಲ್ಲಾ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಅಂಗಡಿ ಅವರು ಕುಟುಂಬಸ್ಥರಿಗೆ ಧೈರ್ಯ ಹೇಳಿ ಮಾತನಾಡಿದ ಅವರು ರಾಜ್ಯ ಸರ್ಕಾರ ಮನೆ ಕಳೆದುಕೊಂಡು ಎಲ್ಲರಿಗೂ ಮನೆ ಕಟ್ಟಿಸಿಕೊಳ್ಳಲು 5 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.ಕೇವಲ ಸರಕಾರದಿಂದ ಬರವಸೆ ಆಗಬಾರದು. ತಾಲೂಕು ಆಡಳಿತ ಕಾರ್ಮಿಕರಾಗಿ ಎಲ್ಲಾ ಗ್ರಾಮಗಳಲ್ಲಿ ಭೇಟಿ ನೀಡಿ ವರದಿ ಸಲ್ಲಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.

ಈ ವೇಳೆ ಗ್ರಾಮ ಪಂಚಾಯಿತಿಯ ಸದಸ್ಯರು ಹಾಗೂ ಗ್ರಾಮದ ಹಿರಿಯರು ಮುಖಂಡರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

11/08/2022 10:26 pm

Cinque Terre

14.49 K

Cinque Terre

0

ಸಂಬಂಧಿತ ಸುದ್ದಿ