ಅಣ್ಣಿಗೇರಿ: ತಾಲೂಕಿನಾದ್ಯಂತ ನಿನ್ನೆ ರಾತ್ರಿ ಸುರಿದ ಅತಿಯಾದ ಮಳೆಗೆ ಅಣ್ಣಿಗೇರಿ ತಾಲೂಕು ಸಂಪೂರ್ಣ ಬೆಚ್ಚಿಬಿದ್ದಿದೆ, ಹೌದು ನಿನ್ನೆ ಸಾಯಂಕಾಲ 06:36 ಸುಮಾರಿಗೆ ಏಕಾಏಕಿ ಪ್ರಾರಂಭವಾದ ಮಳೆ 5 ಗಂಟೆಗಳ ಕಾಲ ಸತತವಾಗಿ ಸುರಿದ ಪರಿಣಾಮ ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮಗಳಲ್ಲಿ ಜನರು ಬೆಚ್ಚಿಬಿದ್ದಿದ್ದಾರೆ.
ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಅಂಗಡಿಯವರು ಪಟ್ಟಣದ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಧೈರ್ಯ ತುಂಬಿ ಸಾಂತ್ವಾನ ಹೇಳಿದರು. ಈ ವೇಳೆ ಮಾತನಾಡಿದ ಅವರು ಸರ್ಕಾರ ಶೀಘ್ರದಲ್ಲೇ ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣವೇ ಪರಿಹಾರ ಘೋಷಣೆ ಮಾಡಬೇಕು ಹಾಗೂ ಅವೈಜ್ಞಾನಿಕವಾಗಿ ನಿರ್ಮಾಣವಾದ ರಸ್ತೆ, ಗಟಾರ್ ಸರಿಪಡಿಸಿ ನೀರು ಬರದ ಹಾಗೆ ತಡೆಯಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
Kshetra Samachara
06/09/2022 05:19 pm