ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಜನಸ್ನೇಹಿ ಪೊಲೀಸ್ ಠಾಣೆಯ ಪಿಎಸ್ಐ ಜೂಲಕಟ್ಟಿ ಅಧಿಕಾರಿಗೆ ಬೀಳ್ಕೊಡುಗೆ

ಅಣ್ಣಿಗೇರಿ: ಪಟ್ಟಣದ ಜನಸ್ನೇಹಿ ಪೊಲೀಸ್ ಠಾಣೆಯ ಪಿಎಸ್ಐ ಲಾಲಸಾಬ್ ಜೂಲಕಟ್ಟಿ ಯವರು ಕಳೆದ ಮೂರು ವರ್ಷಗಳಿಂದ ಅಣ್ಣಿಗೇರಿಯ ಜನಸ್ನೇಹಿ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿ ಇದೀಗ ಗದಗ್ ಹೆಸ್ಕಾಂಗೆ ವರ್ಗಾವಣೆ ಆದ ಹಿನ್ನೆಲೆಯಲ್ಲಿ ಪಟ್ಟಣದ ಗಣ್ಯರು ಹಾಗೂ ಸಾರ್ವಜನಿಕರು ಹಾಗೂ ಹಲವಾರು ಇಲಾಖೆ ಅಧಿಕಾರಿಗಳಿಂದ ಗೌರವಪೂರ್ವಕವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.

ಪೊಲೀಸ್ ಠಾಣೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನವಲಗುಂದ ಪೊಲೀಸ್ ಠಾಣೆಯ ಸಿಪಿಐ ಪಾಟೀಲ್ ಮಾತನಾಡಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಅವರಿಗೆ ಬರುವ ದಿನಗಳಲ್ಲಿ ಉನ್ನತ ಹುದ್ದೆಗೆ ಅಲಂಕರಿಸಲಿ ಎಂದು ಶುಭ ಹಾರೈಸಿದರು. ಇದೇ ವೇಳೆ ಪಟ್ಟಣದ ಗಣ್ಯರು ಹಾಗೂ ಸಾರ್ವಜನಿಕರು ಹಾಗೂ ಪುರಸಭೆ ಆಡಳಿತ ವರ್ಗ ಪಿಎಸ್ಐ ಲಾಲ್ ಸಾಬ್ ಜೂಲಕಟ್ಟಿ ಅವರಿಗೆ ಗೌರವಪೂರ್ವಕ ಸನ್ಮಾನಿಸಿದರು.

Edited By : PublicNext Desk
Kshetra Samachara

Kshetra Samachara

20/09/2022 08:34 pm

Cinque Terre

10.21 K

Cinque Terre

0

ಸಂಬಂಧಿತ ಸುದ್ದಿ