ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಜೆಡಿಎಸ್ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಪ್ರಕಾಶ ಅಂಗಡಿ ನೇಮಕ

ಅಣ್ಣಿಗೇರಿ: ಕರ್ನಾಟಕ ಪ್ರದೇಶ ಜನತಾ ದಳ( ಜಾತ್ಯತೀತ) ಪಕ್ಷದ ರಾಜ್ಯ ಕಾರ್ಯದರ್ಶಿಯನ್ನಾಗಿ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಗ್ರಾಮದ ಪ್ರಕಾಶ ಅಂಗಡಿ ವಕೀಲರು ನೇಮಕ ಆಗಿರುತ್ತಾರೆ.

ಈ ಹಿಂದೆ ಗದಗ ಜಿಲ್ಲಾ ವಿದ್ಯಾರ್ಥಿ ಜನತಾದಳದ ಅಧ್ಯಕ್ಷರಾಗಿ ಧಾರವಾಡ ಜಿಲ್ಲಾ ಯುವ ಜಾತ್ಯಾತೀತ ಜನತಾದಳದ ಅಧ್ಯಕ್ಷರಾಗಿ ಮತ್ತು ರಾಜ್ಯ ಯುವ ಜಾತ್ಯತೀತ ಜನತಾದಳದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿ ಧಾರವಾಡ ಜಿಲ್ಲಾ ಜಾತ್ಯತೀತ ಜನತಾದಳದ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದು, ಹಾಗೂ ಅಣ್ಣಿಗೇರಿ ಮತ್ತು ನವಲಗುಂದ ತಾಲೂಕಿನ ಎಪಿಎಂಸಿ ಮಾಜಿ ಅಧ್ಯಕ್ಷರು ಮತ್ತು ಕರ್ನಾಟಕ ರಾಜ್ಯ ಮಾರಾಟ ಮಂಡಳಿಯ ಸದಸ್ಯರು ಬೆಂಗಳೂರು. ಈಗ ಇವರ ಸೇವೆ ಪರಿಗಣಿಸಿ ಪಕ್ಷದ ವರಿಷ್ಠರಾದ ಎಚ್ ಡಿ ಕುಮಾರಸ್ವಾಮಿ ಅವರ ನಿರ್ದೇಶನದ ಮೇರೆಗೆ ರಾಜ್ಯ ಜೆಡಿಎಸ್ ಅಧ್ಯಕ್ಷರಾದ ಸಿಎಂ ಇಬ್ರಾಹಿಂ ಅವರು ಪ್ರಕಾಶ್ ಅಂಗಡಿ ವಕೀಲರು ಪಕ್ಷದ ರಾಜ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಆದೇಶಿಸಿದ್ದಾರೆ.

ರಾಜ್ಯ ಕಾರ್ಯದರ್ಶಿಯಾಗಿ ಪ್ರಕಾಶ್ ಅಂಗಡಿ ವಕೀಲರು ನೇಮಕ ಆಗುತ್ತಿದ್ದಂತೆ ಪಕ್ಷದ ವರಿಷ್ಠರು,ಮುಖಂಡರು, ಕಾರ್ಯಕರ್ತರು ಹಾಗೂ ಭದ್ರಾಪುರ ಮತ್ತು ನವಲಗುಂದ ವಿಧಾನಸಭಾ ಕ್ಷೇತ್ರಗಳ ಮತದಾರರು ಶುಭಾಶಯ ಕೋರುತ್ತಿದ್ದಾರೆ.

Edited By : PublicNext Desk
Kshetra Samachara

Kshetra Samachara

29/09/2022 06:01 pm

Cinque Terre

1.97 K

Cinque Terre

0

ಸಂಬಂಧಿತ ಸುದ್ದಿ