ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

1041.80 ಕೋಟಿ ವೆಚ್ಚದ 24*7 ಕುಡಿಯುವ ನೀರಿನ ಯೋಜನೆ ನೀಲನಕ್ಷೆ ತಯಾರು:ಸಚಿವ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: 1041.80 ಕೋಟಿ ವೆಚ್ಚದಲ್ಲಿ ಧಾರವಾಡ ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ಮಲಪ್ರಭಾ ನದಿಯಿಂದ 24*7 ಕುಡಿಯುವ ನೀರು ಸರಬರಾಜು ಮಾಡುವ ಯೋಜನೆಯ ನೀಲನಕ್ಷೆ ತಯಾರಾಗಿದೆ. ಈ ಕುರಿತು ಜಿಲ್ಲೆಯ ಜನಪ್ರತಿನಿಧಿಗಳ ಸಭೆ ಜರುಗಿಸಿದ್ದು, ಯೋಜನೆಗೆ ತಾತ್ವಿಕವಾಗಿ ಒಪ್ಪಿಗೆ ನೀಡಲಾಗಿದೆ ಎಂದು ಬೃಹತ್ ಮತ್ತು ಮದ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಈ ಕುರಿತು ಹುಬ್ಬಳ್ಳಿಯ ಸಕ್ರ್ಯೂಟ್ ಹೌಸ್‍ನಲ್ಲಿ ಜರುಗಿದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯ ಬಳಿಕೆ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಎಸ್.ಟಿ.ಯು.ಪಿ ಕನ್ಸ್‍ಲಟೆಂಟ್ ನವರು ಯೋಜನೆಯ ಪ್ರಾಥಮಿಕ ಸಿದ್ದತಾ ವರದಿಯನ್ನು ವಿಸ್ತೃತವಾಗಿ ಜನಪ್ರತಿನಿಧಿಗಳೆದರು ಮಂಡಿಸಿದ್ದಾರೆ. ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಕಲ್ಲಿದ್ದಲು ಸಚಿವರಾದ ಪ್ರಲ್ಹಾದ್ ಜೊಶಿಯವರು ವೆಬ್‍ನಾರ್ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು. ಕಲಘಟಗಿ ನಗರ ಸೇರಿದಂತೆ ಜಿಲ್ಲೆಯಾ ಎಲ್ಲಾ ಗ್ರಾಮಗಳಿಗೂ ಕುಡಿಯುವ ನೀರುನ್ನು ಸರಬರಾಜು ಮಾಡಲಾಗುವುದು. 900.46 ಕೋಟಿ ಯೋಜನೆ ಅನುಷ್ಠಾನಕ್ಕೆ, 141 ಕೋಟಿ 5 ವರ್ಷಗಳ ಕಾಲ ಯೋಜನೆ ನಿರ್ವಹಣೆಗೆ ಮೀಸಲಿರಸಲಾಗುವುದು. ಜಿ.ಪಂ. ಸಿಇಓ ಸಭೆಯ ನಿರ್ಣಯದ ವರದಿಯನ್ನು ಸರ್ಕಾರಕ್ಕೆ ಕಳುಹಿಸಿಕೊಡಲಿದ್ದಾರೆ. ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಒಪ್ಪಿಗೆ ಪಡೆದು ಸಚಿವ ಸಂಪುಟ ಸಭೆಯನ್ನು ಯೋಜನೆಯನ್ನು ಮಂಡಿಸಲಾಗುವುದು. ಸಚಿವ ಸಂಪುಟ ಒಪ್ಪಿಗೆ ನಂತರ ಯೋಜನೆ ಟೆಂಡರ್ ಕರೆಯಲಾಗುವುದು.

ಹುಬ್ಬಳ್ಳಿ ಧಾರವಾಡ ಅವಳಿ ನಗರದ 24*7 ಕುಡಿಯುವ ನೀರಿನ ಯೋಜನೆಗೆ ಕುರಿತು ಎಲ್.ಎನ್.ಟಿ ಕಂಪನಿಯವರು ಅಧ್ಯಯನಕ್ಕಾಗಿ ಆರು ತಿಂಗಳ ಸಮಯವಕಾಶ ಕೋರಿದ್ದರು. ಅವರಿಗೆ ಮೂರು ತಿಂಗಳ ಸಮಯವಕಾಶ ನೀಡಲಾಗಿದೆ. ಬರುವ ಮಾರ್ಚ ನಂತರ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದರು.

ಸ್ಮಾರ್ಟ ಸಿಟಿ ಯೋಜನೆಯ ಕಾಮಗಾರಿಗಳು ನಡೆಯುವ ಜಾಗದಲ್ಲಿ ಅಗತ್ಯ ಮುಂಜಾಗೃತ ಹಾಗೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳೂವಂತೆ ಸ್ಮಾರ್ಟ್ .ಸಿ.ಟಿ ಎಂಡಿ ಅವರಿಗೆ ಸೂಚನೆ ನೀಡಿದ್ದೇನೆ. ಗ್ಲಾಸ್ ಹೌಸ್ ನಡೆದ ದುರ್ಘಟನೆ ಹೆಣ್ಣುಮಗು ಮೃತ ಪಟ್ಟಿರುವುದು ದುರದೃಷ್ಟಕರವಾಗಿದೆ. ಮೃತ ಮಗುವಿನ ಕುಟುಂಬದವರಿಗೆ ಪರಿಹಾರ ನೀಡುವಂತೆ ಸೂಚನೆ ನೀಡಿದ್ದೇನೆ ಎಂದರು.

ಸಭೆಯಲ್ಲಿ ಜಿ.ಪಂ. ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ, ಶಾಸಕರುಗಳಾದ ಪ್ರದೀಪ್ ಶೆಟ್ಟರ್, ಅಮೃತ ದೇಸಾಯಿ, ಜಿ.ಪಂ.ಉಪಾಧ್ಯಕ್ಷ ಶಿವಾನಂದ ಕರಿಗಾರ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿ.ಪಂ. ಸಿಇಓ ಡಾ.ಬಿ.ಸಿ.ಸತೀಶ್ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

29/09/2020 04:54 pm

Cinque Terre

19.62 K

Cinque Terre

2

ಸಂಬಂಧಿತ ಸುದ್ದಿ