ಹುಬ್ಬಳ್ಳಿ: ಕೇಂದ್ರ ಸಚಿವ, ಹಿರಿಯ ರಾಜಕಾರಣಿ ರಾಮ್ ವಿಲಾಸ್ ಪಾಸ್ವಾನ್ ನಿಧನಕ್ಕೆ ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಕಳೆದ ಐದು ದಶಕಗಳಿಂದ ರಾಷ್ಟ್ರದ ರಾಜಕಾರಣದಲ್ಲಿ ಸಕ್ರಿಯರಾಗಿದ್ದ ರಾಮ್ ವಿಲಾಸ್ ಪಾಸ್ವಾನ್ ದೇಶದ ಪರಿಶಿಷ್ಟ ಸಮುದಾಯಗಳ ಸಮರ್ಥ ನಾಯಕರಾಗಿದ್ದರು. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಬರಲಿ ಎಂದು ಪ್ರಾರ್ಥಿಸಿದ್ದಾರೆ.
Kshetra Samachara
09/10/2020 08:39 am