ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ದೀದಿ ಫೋಟೋ ಸುಟ್ಟ ಬಿಜೆಪಿ ಕಾರ್ಯಕರ್ತರು

ಧಾರವಾಡ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಯುವಮೋರ್ಚಾ ವತಿಯಿಂದ ನಡೆಯುತ್ತಿದ್ದ ಮೆರವಣಿಗೆ ವೇಳೆ ಅಲ್ಲಿನ ಸರ್ಕಾರ ಬಿಜೆಪಿ ಕಾರ್ಯಕರ್ತರ ಮೇಲೆ ನಾಡ ಬಾಂಬ್ ಹಾಗೂ ಟಿಯರ್ ಗ್ಯಾಸ್ ದಾಳಿ ನಡೆಸಿರುವುದನ್ನು ಖಂಡಿಸಿ ಧಾರವಾಡದ ಕೋರ್ಟ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಈ ಮೆರವಣಿಗೆ ನಡೆಯುತ್ತಿತ್ತು. ಆದರೆ, ಪಶ್ಚಿಮ ಬಂಗಾಳದಲ್ಲಿರುವ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ಮಾಡಿದೆ ಎಂದು ಬಿಜೆಪಿ ಕಾರ್ಯಕರ್ತರು ಮಮತಾ ಬ್ಯಾನರ್ಜಿ ವಿರುದ್ಧ ಘೋಷಣೆ ಕೂಗಿ, ಅವರ ಫೋಟೋ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

Edited By : Manjunath H D
Kshetra Samachara

Kshetra Samachara

09/10/2020 10:02 am

Cinque Terre

37.94 K

Cinque Terre

5

ಸಂಬಂಧಿತ ಸುದ್ದಿ