ಧಾರವಾಡ: ಸದಾ ಕ್ರಿಯಾಶೀಲ ನಾಯಕ ಹಾಗೂ ಜನಪರ ಚಿಂತಕರಾಗಿದ್ದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನವು ನಮ್ಮ ದೇಶಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ ಸಂತಾಪ ಸೂಚಿಸಿದ್ದಾರೆ.
ಕೇಂದ್ರ ಆಹಾರ ಮತ್ತು ನಾಗರಿಕ ಖಾತೆ ಸಚಿವರಾಗಿ ಪಾಸ್ವಾನ್ ಅವರು ಹಲವಾರು ಸುಧಾರಣೆಗಳನ್ನು ಮಾಡಿದ್ದಾರೆ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಆ ಭಗವಂತ ನೀಡಲಿ ಎಂದಿದ್ದಾರೆ.
Kshetra Samachara
09/10/2020 11:48 am