ಹುಬ್ಬಳ್ಳಿ: ರಾಜ್ಯ ಹಾಗೂ ದೇಶದಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು,ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸೂಕ್ತ ಕ್ರಮಗಳನ್ನು ಜರುಗಿಸಬೇಕು ಎಂದು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ರಾಜ್ಯದಲ್ಲಿ ಹಾಗೂ ದೇಶದಲ್ಲಿ ಎಷ್ಟೇ ಕಟ್ಟುನಿಟ್ಟಾದ ಕಾನೂನು ಜಾರಿಗೊಳಿಸಿದರು ಕೂಡ ಲೈಂಗಿಕ ದೌರ್ಜನ್ಯಕ್ಕೆ ಕಡಿವಾಣ ಹಾಕಲು ಸಾಧ್ಯವಾಗುತ್ತಿಲ್ಲ ಆದ್ದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಲೈಂಗಿಕ ದೌರ್ಜನ್ಯ ಎಸಿಗಿದವರನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಇಲ್ಲವೇ ಗಲ್ಲಿಗೆ ಏರಿಸಬೇಕು ಅಂದಾಗ ಮಾತ್ರ ನಿಯಂತ್ರಣ ಸಾಧ್ಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
Kshetra Samachara
09/10/2020 02:21 pm