ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರಕ್ಕೆ ವಿಧಾನಸಭೆಯಲ್ಲಿ ಬಿಜೆಪಿ ಬಹುಮತ ಇದೆ.ಅದೇ ರೀತಿ ವಿಧಾನ ಪರಿಷತ್ ನಲ್ಲಿಯೂ ಬಹುಮತ ಬೇಕಿದೆ.ಪದವೀಧರ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗೆ ಬೆಂಬಲಿಸಿ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಜನರು ಬಿಜೆಪಿಯ ಕಾರ್ಯವೈಖರಿಯನ್ನು ನೋಡಿದ್ದಾರೆ.ಅಲ್ಲದೇ ಜನರಿಗೆ ಬಿಜೆಪಿಯ ಬಗ್ಗೆ ವಿಶ್ವಾಸವಿದೆ ಎಂದರು.
ಕೆಐಎಡಿಬಿ ದರ ಏರಿಕೆ ಕುರಿತು ಮಾತನಾಡಿದ ಅವರು,ನಿರ್ದೇಶನದ ಮೇರೆಗೆ ಪರಿಷ್ಕೃತ ದರವನ್ನು ನಿಗದಿ ಮಾಡಲಾಗಿದೆ.ಈ ಕುರಿತು ಇನ್ನೊಮ್ಮೆ ಪರಿಶೀಲನೆ ನಡೆಸುತ್ತೇನೆ ಎಂದು ಭರವಸೆ ನೀಡಿದರು.
ಇನ್ನೂ ಬೆಳಗಾವಿ ಲೋಕಸಭಾ ಉಪ ಚುನಾವಣೆ ಕುರಿತು ಮಾತನಾಡಿದ ಅವರು, ಚುನಾವಣೆ ಕುರಿತು ಇನ್ನೂ ಘೋಷಣೆಯಾಗಿಲ್ಲ.ಈ ಬಗ್ಗೆ ಟಿಕೆಟ್ ಯಾರಿಗೆ ನೀಡಬೇಕು ಎಂಬುದರ ಕುರಿತು ಇನ್ನೂ ಚರ್ಚೆಯಾಗಿಲ್ಲ.ಚುನಾವಣೆ ಘೋಷಣೆಯಾದ ಬಳಿಕ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚಿಸಲಾಗುವುದು ಎಂದ ಅವರು,ನನಗೆ ಟಿಕೆಟ್ ನೀಡಲು ಚರ್ಚೆಯಾಗಿದೆ ಎಂದು ಯಾರೂ ಹೇಳಿಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.
ಲೋಕಸಭಾ ಟಿಕೆಟ್ ನನಗೆ ಸಿಕ್ಕರೆ ನನ್ನ ಕುಟುಂಬಸ್ಥರಿಗೆ ವಿಧಾನಸಭೆ ಟಿಕೆಟ್ ಗಾಗಿ ಬೇಡಿಕೆ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಶೆಟ್ಟರ್, ಆ ರೀತಿ ಯಾವುದೇ ಚರ್ಚೆಯಾಗಿಲ್ಲ.ಕೇವಲ ಊಹಾಪೋಹಗಳಿಗೆ ನಾನು ಉತ್ತರ ನೀಡುವುದಿಲ್ಲ ಎಂದರು.
Kshetra Samachara
10/10/2020 06:26 pm