ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಉ.ಕ ಹೃದಯ ಭಾಗದಲ್ಲಿರುವ ಕಿಮ್ಸ್ ಆಸ್ಪತ್ರೆಯ ವೈದ್ಯರ ಕೊರತೆ ನೀಗಿಸಲು ಶೆಟ್ಟರ್ ಭರವಸೆ

ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಸಂಜೀವಿನಿ ಎಂದೇ ಖ್ಯಾತಿ ಪಡೆದ ಕಿಮ್ಸ್ ಆಸ್ಪತ್ರೆಯಲ್ಲಿ ಕಿಮ್ಸ್ ವೈದ್ಯರ ಕೊರತೆ ಎದ್ದು ಕಾಣುತ್ತಿತ್ತು. ಈ ಹಿನ್ನೆಲೆಯಲ್ಲಿ ನಿಮ್ಮ ಪಬ್ಲಿಕ್ ನೆಕ್ಸ್ಟ್ ವರದಿಯೊಂದನ್ನು ಭಿತ್ತರಿಸಿದ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಕೂಡಲೇ ಕಿಮ್ಸ್ ವೈದ್ಯರ ಕೊರತೆಯನ್ನು ಸರಿಪಡಿಸುವುದಾಗಿ ಭರವಸೆ ನೀಡಿದಿದ್ದಾರೆ.

ಈ ಕುರಿತು ಪಬ್ಲಿಕ್ ನೆಕ್ಸ್ಟ್ ಗೆ ಪ್ರತಿಕ್ರಿಯೆ ನೀಡಿದ ಅವರು,ಕಾಲಕ್ಕೆ ತಕ್ಕಂತೆ ನೇಮಕಾತಿಗಳಾಗಿದ್ದರೇ ಈ ಸಮಸ್ಯೆ ಬರುತ್ತಿರಲಿಲ್ಲ.ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇರುವುದು ಗಮನಕ್ಕೆ ಬಂದಿದೆ.ಕೂಡಲೇ ಸೂಕ್ತ ರೀತಿಯಲ್ಲಿ ನಿರ್ಧಾರವನ್ನು ಕೈಗೊಂಡು ಸಮಸ್ಯೆ ಬಗೆಹರಿಸಲಾಗುವುದು ಎಂದರು.

ಇದು ನಮ್ಮ‌ ಸರ್ಕಾರದ ಅವಧಿಯಲ್ಲಿ ಬಂದಿರುವ ಸಮಸ್ಯೆ ಅಲ್ಲ‌ ಹಿಂದಿನ ಸರ್ಕಾರದವರು ಸರಿಯಾದ ರೀತಿಯಲ್ಲಿ ನೇಮಕಾತಿ ಪ್ರಕ್ರಿಯೆ ಮಾಡಿದ್ದರ ಈ ಸಮಸ್ಯೆ ಇರುತ್ತಿರಲಿಲ್ಲ ಈಗ ಸಮಸ್ಯೆ ನಮ್ಮ ಗಮನಕ್ಕೆ ಬಂದಿದೆ.ಕೂಡಲೇ ಇದರ ಬಗ್ಗೆ ಕಾಳಜಿ ವಹಿಸಲಾಗುತ್ತದೆ ಎಂದು ಭರವಸೆ ನೀಡಿದರು.

Edited By : Nagesh Gaonkar
Kshetra Samachara

Kshetra Samachara

12/10/2020 03:33 pm

Cinque Terre

19.99 K

Cinque Terre

1

ಸಂಬಂಧಿತ ಸುದ್ದಿ