ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ: ಹುಣಸಿಕಟ್ಟಿಯಲ್ಲಿ ಕರ್ನಾಟಕ ಸಂಗ್ರಾಮ ಸೇನೆ ಗ್ರಾಮ ಘಟಕದ ಉದ್ಘಾಟನೆ

ಕಲಘಟಗಿ:ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ಕರ್ನಾಟಕ ಸಂಗ್ರಾಮ ಸೇನೆ ಗ್ರಾಮ ಘಟಕವನ್ನು ಸಸಿಯನ್ನು ನೆಡುವ ಮೂಲಕ‌ ವಿದ್ಯುಕ್ತವಾಗಿ ಉದ್ಘಾಟಿಸಲಾಯಿತು.ಕರೋನಾ ಸೇನಾನಿಗಳಾಗಿ ಸೇವೆ ಸಲ್ಲಿಸಿದ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು,ಗ್ರಾಮ ಪಂಚಾಯತಿ ಸಿಬ್ಬಂದಿಗೆ ಸನ್ಮಾನಿಸಲಾಯಿತು.ಗ್ರಾಮ ಘಟಕದ ನೂತನ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಸಂಗ್ರಾಮ ಸೇನೆ ಅಧ್ಯಕ್ಷ ಸಾತಪ್ಪ ಕುಂಕೂರ,ಉಪಾಧ್ಯಕ್ಷ ಶಂಕರಗೌಡ ಬಾವಿಕಟ್ಟಿ,ಸೌಮ್ಯ ನಾಯಕಿ ಹಾಗೂ ಗ್ರಾಮ ಘಟಕದ ನೂತನ ಪದಾಧಿಕಾರಿಗಳು ಹಾಗೂ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

12/10/2020 05:01 pm

Cinque Terre

13.44 K

Cinque Terre

0

ಸಂಬಂಧಿತ ಸುದ್ದಿ