ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: "ಮಾದರಿ ನೀತಿ ಸಂಹಿತೆ, ಕೊರೊನಾ ಮಾರ್ಗಸೂಚಿ ಪಾಲನೆ ಕಡ್ಡಾಯ"

ಧಾರವಾಡ : ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯಲ್ಲಿ ಜಾರಿಯಲ್ಲಿರುವ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಹಾಗೂ ಭಾರತ ಚುನಾವಣಾ ಆಯೋಗವು ನೀಡಿರುವ ಕೋವಿಡ್-19 ಮಾರ್ಗಸೂಚಿಗಳನ್ನು ಸ್ಪರ್ಧಿಸಿರುವ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷದ ಪ್ರತಿನಿಧಿಗಳು ಚಾಚೂ ತಪ್ಪದೇ ಪಾಲಿಸುವುದು ಕಡ್ಡಾಯವಾಗಿದೆ ಎಂದು ಚುನಾವಣಾಧಿಕಾರಿಗಳೂ ಆಗಿರುವ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಹೇಳಿದರು.

ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ರಾಜಕೀಯ ಪಕ್ಷದ ಪ್ರತಿನಿಧಿಗಳ ಹಾಗೂ ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣಾ ಅಭ್ಯರ್ಥಿಗಳ ಸಭೆ ಉದ್ದೇಶಿಸಿ ಮಾತನಾಡಿದರು.

ಚುನಾವಣಾ ಪ್ರಕ್ರಿಯೆಗಳು ಮುಕ್ತ ಹಾಗೂ ನಿಷ್ಪಕ್ಷಪಾತವಾಗಿ ಮತ್ತು ಪಾರದರ್ಶಕವಾಗಿ ಜರುಗುವಂತೆ ಕ್ರಮ ವಹಿಸುವುದು ಎಲ್ಲರ ಕರ್ತವ್ಯವಾಗಿದೆ. ಭಾರತದ ಚುನಾವಣಾ ಆಯೋಗವು ಚುನಾವಣಾ ದಿನಾಂಕ ಘೋಷಿಸಿದ ದಿನದಿಂದ ಜಾರಿಯಾಗಿರುವ ಮಾದರಿ ನೀತಿ ಸಂಹಿತೆಯನ್ನು ಪ್ರತಿಯೊಂದು ಪಕ್ಷಗಳು ಪಾಲಿಸಬೇಕು.

ಬಹಿರಂಗ ಪ್ರಚಾರ, ವಾಹನಗಳ ಬಳಕೆ, ಪ್ರಚಾರ ಸಾಮಗ್ರಿ ಇತ್ಯಾದಿಗಳ ಕುರಿತು ಅನುಮತಿ ನೀಡಲು ಪಶ್ಚಿಮ ಪದವೀಧರ ಮತಕ್ಷೇತ್ರ ವ್ಯಾಪ್ತಿಯ ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕ್ರಮಕೈಗೊಳ್ಳಲಾಗಿದೆ.

ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ತಮಗೆ ಅಗತ್ಯವಿರುವ ಅನುಮತಿಗಳನ್ನು ಸಹಾಯಕ ಚುನಾವಣಾಧಿಕಾರಿಗಳು ಆಗಿರುವ ಆಯಾ ಜಿಲ್ಲಾಧಿಕಾರಿಗಳಿಂದ ಪಡೆಯಬಹುದು.ಬಹಿರಂಗ ಪ್ರಚಾರ ಸಭೆಗಳಲ್ಲಿ ಮತ್ತು ಮನೆ ಮನೆಗೆ ತೆರಳಿ ಪ್ರಚಾರ ಹಾಗೂ ಒಳಾಂಗಣ ಸಭೆಗಳಲ್ಲಿ ಕೋವಿಡ್-19 ಮಾರ್ಗಸೂಚಿಗಳಲ್ಲಿ ತಿಳಿಸಿರುವ ಸಂಖ್ಯೆಯಷ್ಟು ಸಾರ್ವಜನಿಕರು ಮಾತ್ರ ಭಾಗವಹಿಸಬೇಕು. ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.

Edited By :
Kshetra Samachara

Kshetra Samachara

13/10/2020 10:23 pm

Cinque Terre

10.74 K

Cinque Terre

0

ಸಂಬಂಧಿತ ಸುದ್ದಿ