ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ:ಗಳಗಿ ಗ್ರಾ ಪಂ 86 ಲಕ್ಷ ರೂ ಅವ್ಯವಹಾರ ತನಿಖೆ ಕೈಗೊಳ್ಳದಿದ್ದರೆ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಕಲಘಟಗಿ:ತಾಲೂಕಿನ ಗಳಗಿ ಗ್ರಾ ಪಂ 14 ನೇ ಹಣಕಾಸು ಯೋಜನೆಯಲ್ಲಿ ಸುಮಾರು 86 ಲಕ್ಷ ಅವ್ಯವಹಾರ ಆಗಿದೆ ಎಂದು ಆರೋಪಿಸಿರುವ ಗ್ರಾಮಸ್ಥರು ತನಿಖೆ ಮಾಡಿ ಕಾನೂನು‌ಕ್ರಮ‌ ಜರುಗಿಸದೇ ಇದ್ದರೇ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆ

ಬಹಿಷ್ಕಾರ ಮಾಡುತ್ತೇವೆ ಎಂದು ಎಚ್ಚರಿದ್ದಾರೆ.

ಕಳಪೆ ಕಾಮಗಾರಿ ಮಾಡಿ ಬಿಲ್ಲು ಪಾವತಿ ಮಾಡಿದ್ದನ್ನು ಮರಳಿ ಸರ್ಕಾರಕ್ಕೆ ಕಟ್ಟಿ ನ್ಯಾಯ ಒದಗಿಸಿ ಕೊಡಬೇಕೆಂದು ವಾಯ್ ಕೆ ಪಾಟೀಲ ಒತ್ತಾಯಿಸಿದ್ದಾರೆ.

ಯಾವುದೇ ಕಾಲಹರಣ ಮಾಡದೆ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿ ಸೂಕ್ತ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳದಿದ್ದರೆ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಗೆ ಗ್ರಾಮಸ್ಥರೆಲ್ಲ ಸೇರಿ ಬಹಿಷ್ಕಾರ ಹಾಕುತ್ತೇವೆ ಎಂದು ಶಂಕರ ಶಿಂದೆ ಆಗ್ರಹಿಸಿದ್ದಾರೆ.

Edited By :
Kshetra Samachara

Kshetra Samachara

13/10/2020 10:37 pm

Cinque Terre

11.83 K

Cinque Terre

1

ಸಂಬಂಧಿತ ಸುದ್ದಿ