ಧಾರವಾಡ: ಅಖಿಲ ಭಾರತ ಪ್ರತಿರೋಧ ದಿನದ ಅಂಗವಾಗಿ ಆರ್ ಕೆಎಸ್ ರೈತ ಕೃಷಿ ಕಾರ್ಮಿಕರ ಸಂಘಟನೆಯು ರೈತರೊಂದಿಗೆ ಕೂಡಿಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಪ್ರತಿರೋಧ ವ್ಯಕ್ತಪಡಿಸಿತು.
ಧಾರವಾಡದ ಕಲಾಭವನದಿಂದ ವಿವೇಕಾನಂದ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ವಿವೇಕಾನಂದ ವೃತ್ತದಲ್ಲಿ ಸರ್ಕಾರಗಳು ಜಾರಿಗೆ ತರಲು ಉದ್ದೇಶಿಸಿರುವ ಭೂ ಸುಧಾರಣಾ ತಿದ್ದುಪಡಿ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆಯ ಪ್ರತಿಗಳನ್ನು ಸುಟ್ಟು ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
Kshetra Samachara
14/10/2020 05:29 pm