ಹುಬ್ಬಳ್ಳಿ: ಇತ್ತೀಚೆಗೆ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಖಾಸಗಿ ವಾಹಿನಿಯ ಕ್ಯಾಮರಾಮೆನ್ ಸುನೀಲ್ ಪಾಚಂಗೆ ಅವರ ಇಂದ್ರಪ್ರಸ್ಥ ನಗರದ ಮನೆಗೆ ಗುರುವಾರ ಭೇಟಿ ನೀಡಿದ ಶಾಸಕ ಪ್ರಸಾದ ಅಬ್ಬಯ್ಯ ಅವರು, ಪಾಚಂಗೆ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಸದಾ ಲವಲವಿಕೆಯಿಂದ ಕಾರ್ಯನಿರ್ವಹಿಸುತ್ತಿದ್ದ ಸುನೀಲ್ ಅವರು ನಿಧನರಾದ ಸುದ್ದಿ ಕೇಳಿ ನಿಜಕ್ಕೂ ತೀವ್ರ ಆಘಾತವಾಯಿತು. ನಿಮ್ಮ ಕುಟುಂಬದ ಜೊತೆ ಸದಾ ನಾನಿರುವೆ ಎಂಬುದಾಗಿ ಕುಟುಂಬಸ್ಥರಿಗೆ ಧೈರ್ಯ ತುಂಬಿ, ವೈಯಕ್ತಿಕವಾಗಿ ಆರ್ಥಿಕ ಸಹಾಯ ಮಾಡಿದರು.
Kshetra Samachara
15/10/2020 09:43 pm