ಧಾರವಾಡ: ಪಶ್ಚಿಮ ಪದವೀಧರರ ವಿಧಾನ ಪರಿಷತ್ ಚುನಾವಣೆ ರಂಗು ಪಡೆದುಕೊಂಡಿದೆ. ಈಗಾಗಲೇ ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಎಸ್.ವಿ.ಸಂಕನೂರ ಅವರು ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದು, ಇವರ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಎಂದೇ ಹೇಳಲಾಗುತ್ತಿದೆ.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಅಧ್ಯಕ್ಷರಾಗಿದ್ದ ಗುರಿಕಾರ, ಸಾಕಷ್ಟು ಹೋರಾಟಗಳ ಮೂಲಕ ತಮ್ಮನ್ನು ಗುರುತಿಸಿಕೊಂಡವರು. ಇದೀಗ ಅವರು ಪಶ್ಚಿಮ ಪದವೀಧರರ ವಿಧಾನ ಪರಿಷತ್ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಿಂತು ಪದವೀಧರರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುವ ಕನಸು ಹೊತ್ತಿದ್ದಾರೆ.
ಕಾಂಗ್ರೆಸ್ ಪಕ್ಷವು ಕುಬೇರಪ್ಪ ಅವರನ್ನು ಕಣಕ್ಕಿಳಿಸಿದ್ದು, ಇದರ ಮಧ್ಯೆ ಬಸವರಾಜ ಗುರಿಕಾರ ಅವರು ಸಾಕಷ್ಟು ಜನ ಮನ್ನಣೆ ಗಳಿಸಿದ್ದಾರೆ. ಈಗಾಗಲೇ ಉತ್ತರ ಕನ್ನಡ, ಗದಗ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಎರಡು ಸುತ್ತಿನ ಪ್ರಚಾರ ಕಾರ್ಯ ಮುಗಿಸಿದ್ದು, ಮತ್ತೊಂದು ಸುತ್ತಿನ ಪ್ರಚಾರಕ್ಕೆ ಅಣಿಯಾಗಿದ್ದಾರೆ. ಅವರು ಪದವೀಧರರಿಗಾಗಿ ಯಾವ ರೀತಿಯ ಯೋಜನೆಗಳನ್ನು ಜಾರಿಗೆ ತರುವ ಉದ್ದೇಶ ಹೊಂದಿದ್ದಾರೆ ಎಂಬುದನ್ನು ಸ್ವತಃ ಅವರಿಂದಲೇ ಕೇಳಿ.
ಅಪಾರ ಶಿಷ್ಯ ಬಳಗ ಹೊಂದಿರುವ ಗುರಿಕಾರ ಅವರು ಬಿಜೆಪಿ ಅಭ್ಯರ್ಥಿಗೆ ನೇರಾ ನೇರ ಠಕ್ಕರ್ ನೀಡುವ ಸಾಧ್ಯತೆ ಇದೆ. ಈಗಾಗಲೇ ಬಿರುಸಿನ ಪ್ರಚಾರ ನಡೆಸುತ್ತಿರುವ ಗುರಿಕಾರ ಚುನಾವಣೆಯಲ್ಲಿ ಗೆಲುವು ಸಾಧಿಸುವ ಹುಮ್ಮಸ್ಸಿನಲ್ಲಿದ್ದಾರೆ.
Kshetra Samachara
16/10/2020 08:05 pm