ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈ ಎಲೆಕ್ಷನ್ ನಂತ್ರ ಕಾಂಗ್ರೆಸ್ ಜೀವಂತ ಶವವಾಗತ್ತೆ: ಜಗದೀಶ್ ಶೆಟ್ಟರ್

ಗದಗ : ಸದ್ಯ ರಾಜ್ಯದಲ್ಲಿ ಬೈ ಎಲೆಕ್ಷನ್ ಕಾವು ಹೆಚ್ಚಾಗುತ್ತಿದೆ. ರಾಜಕೀಯ ಕಣ ರಂಗೇರುತ್ತಿದೆ. ಇದರ ಮಧ್ಯೆ ಪರಸ್ಪರ ರಾಜಕೀಯ ಕೆಸರಾಟವು ಮುಂದುವರೆದಿದೆ.

ಹೌದು ಉಪ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಕೋಮಾ ಸ್ಥಿತಿಗೆ ಬರುತ್ತೆ ಎಂದು ಸಚಿವ ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದಾರೆ.

ನಗರದ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ಆಯೋಜಿಸಿದ್ದ ಪಶ್ಚಿಮ ಪದವೀಧರರ ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಉಪಚುನಾವಣೆಯಲ್ಲಿ ಆರ್.ಆರ್ ನಗರ ಕ್ಷೇತ್ರ ಹಾಗೂ ಶಿರಾ ಕ್ಷೇತ್ರ ಈ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

ದೇಶದ ಎಲ್ಲಾ ರಾಜ್ಯದಲ್ಲೂ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಂಡಿದೆ. ದೇಶದಲ್ಲಿ ಪ್ರಧಾನ ವಿರೋಧ ಪಕ್ಷವಾಗಿ ಕೂಡಲು ಸಹ ಅರ್ಹತೆ ಇಲ್ಲ.

ಇನ್ನು ಜೆಡಿಎಸ್ ಹೆಸರು ಹೇಳದಂತೆ ಹೊರಟಿದೆ. ಜೆಡಿಎಸ್, ಕಾಂಗ್ರೆಸ್ ಅಸ್ತಿತ್ವಕ್ಕಾಗಿ ಹೊಡೆದಾಡುತ್ತಿದ್ದಾರೆ.

ಕಾಂಗ್ರೆಸ್ ಗೆ ಕರ್ನಾಟಕದಲ್ಲಿ ಸ್ವಲ್ಪ ಉಸಿರು ಇದೆ. ಆ ಉಸಿರು ಗಟ್ಟಿಯಾಗಿ ಇಟ್ಟುಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆ.

ಉಪ ಚುನಾವಣೆ ಫಲಿತಾಂಶ ಬಂದ ಬಳಿಕ ಕಾಂಗ್ರೆಸ್ ಕೋಮಾಗೆ ತಲುಪುತ್ತದೆ ಎಂದರು.

Edited By : Nirmala Aralikatti
Kshetra Samachara

Kshetra Samachara

18/10/2020 09:15 pm

Cinque Terre

9.65 K

Cinque Terre

3

ಸಂಬಂಧಿತ ಸುದ್ದಿ