ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕಾಂಗ್ರೆಸ್ ದಲ್ಲಾಳಿಗಳ ಪರವಾಗಿದೆ.. ಬಿಜೆಪಿ ರೈತರ ಪರವಾಗಿದೆ: ಸಿ.ಟಿ.ರವಿ

ಧಾರವಾಡ: ಕಾಂಗ್ರೆಸ್ ಪಕ್ಷ ದಲ್ಲಾಳಿಗಳ ಪರವಾಗಿದೆ. ಬಿಜೆಪಿ ರೈತರ ಪರವಾಗಿ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ಪಶ್ಚಿಮ ಪದವೀಧರರ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಲು ಧಾರವಾಡದ ನೌಕರರ ಭವನಕ್ಕೆ ಬಂದಿದ್ದ ಸಂದರ್ಭದಲ್ಲಿ ಅವರು ಮಾತನಾಡಿದರು.

ಬಿಜೆಪಿ ಜನರಿಗೆ ಕೊಟ್ಟ ಎಲ್ಲ ಆಶ್ವಾಸನೆಗಳನ್ನು ಈಡೇರಿಸುತ್ತಿದೆ. ಶೈಕ್ಷಣಿಕ, ಕೃಷಿ ಹಾಗೂ ಇತರೆ ಕ್ಷೇತ್ರಗಳಲ್ಲಿ ರಾಜ್ಯ ಬಿಜೆಪಿ ಸರ್ಕಾರ ಪ್ರಗತಿ ಸಾಧಿಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಇನ್ನಷ್ಟು ಪ್ರಯತ್ನ ಮಾಡಿದ್ದರೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗೆ ಶೂನ್ಯ ಫಲಿತಾಂಶ ಬರುತ್ತಿತ್ತು. ಈ ಪರಿಷತ್ ಚುನಾವಣೆಯಲ್ಲೂ ಎರಡೂ ಪಕ್ಷಗಳು ಮಕಾಡೆ ಮಲಗಲಿವೆ ಎಂದರು.

ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಚುನಾವಣೆ ಪ್ರಚಾರ ಸಭೆಯ ಸಂಪೂರ್ಣ ವರದಿಯನ್ನು ಸಿ.ಟಿ.ರವಿ ಅವರಿಗೆ ಸಲ್ಲಿಸಲಾಯಿತು.

ಶಾಸಕ ಅಮೃತ ದೇಸಾಯಿ, ಬಿಜೆಪಿ ಮುಖಂಡರಾದ ಈರೇಶ ಅಂಚಟಗೇರಿ, ಮಹೇಶ ಟೆಂಗಿನಕಾಯಿ, ವಿಜಯಾನಂದ ಶೆಟ್ಟಿ ಸೇರಿದಂತೆ ಅನೇಕರು ಈ ಸಂದರ್ಭದಲ್ಲಿದ್ದರು.

Edited By :
Kshetra Samachara

Kshetra Samachara

20/10/2020 09:39 pm

Cinque Terre

16.95 K

Cinque Terre

6

ಸಂಬಂಧಿತ ಸುದ್ದಿ