ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಭೆಯಲ್ಲಿ ಬಿಜೆಪಿ ಹಾಗೂ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು.
ನಗರದಲ್ಲಿಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆಸ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು,ಕರ್ನಾಟಕದಲ್ಲಿ ಯಡಿಯೂರಪ್ಪ ಬಂದ ಮೇಲೆ ಎಲ್ಲ ವ್ಯವಸ್ಥೆ ಅಲ್ಲೊಲ್ಲ ಕಲ್ಲೋಲ ಆಗಿದೆ.ಎಲ್ಲ ಕೂಡ ಫೇಲ್ ಆಗಿದೆ ಎಂದು ಕಿಡಿ ಕಾರಿದರು.
ಬಿಜೆಪಿ ಸರ್ಕಾರದ ಯೋಜನೆಗಳು ಜನಪರವಾಗಿಲ್ಲ ಅವುಗಳು ಸಾರ್ವಜನಿಕ ವಲಯದಲ್ಲಿ ದೊಡ್ಡಮಟ್ಟದ ಹೊಡೆತವನ್ನು ಕೊಟ್ಟಿದೆ ಎಂದು ಕಮಲ ಪಾಳೆಯದ ವಿರುದ್ಧ ಸಿದ್ದರಾಮಯ್ಯ ಗುಡುಗಿದರು.
Kshetra Samachara
21/10/2020 11:09 am