ಪಬ್ಲಿಕ್ ನೆಕ್ಸ್ಟ್ ವಿಶೇಷ ಸಂದರ್ಶನ, ಪ್ರವೀಣ ಓಂಕಾರಿ, ಧಾರವಾಡ.
ಧಾರವಾಡ: ಇದೇ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿರುವ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಅವರು, ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿಲ್ಲ ಅವರು ಏನೂ ಕೆಲಸ ಮಾಡುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿದ್ದ ಹಿನ್ನೆಲೆಯಲ್ಲಿ ನಿಮ್ಮ ಪಬ್ಲಿಕ್ ನೆಕ್ಸ್ಟ್ ಅವರ ವಿಶೇಷ ಸಂದರ್ಶನವೊಂದನ್ನು ನಡೆಸಿದೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಅವರು ಕೈಗೊಂಡಂತಹ ಹಲವು ಅಭಿವೃದ್ಧಿ ಕಾಮಗಾರಿಗಳು ಹಾಗೂ ಮುಂದೆ ಕೈಗೊಳ್ಳಬೇಕಾದ ಕಾಮಗಾರಿಗಳ ವಿಷಯಗಳನ್ನು ಪಬ್ಲಿಕ್ ನೆಕ್ಸ್ಟ್ ಮೂಲಕ ಕ್ಷೇತ್ರದ ಜನರ ಮುಂದಿಟ್ಟಿದ್ದಾರೆ.
ತಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಹಾಕಿಕೊಂಡಿರುವ ಶಾಸಕ ಅಮೃತ ದೇಸಾಯಿ ಅವರಿಗೆ ಯಶಸ್ಸು ಸಿಗಲಿ. ಅವರಿಂದ ಧಾರವಾಡ ಗ್ರಾಮೀಣ ಕ್ಷೇತ್ರ ಅಭಿವೃದ್ಧಿ ಪಥದತ್ತ ಸಾಗಲಿ ಎಂಬುದೇ ನಮ್ಮ ಕಳಕಳಿ.
Kshetra Samachara
22/10/2020 12:38 pm