ಹುಬ್ಬಳ್ಳಿ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣಾ ಮತದಾನಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು,ಧಾರವಾಡ ಜಿಲ್ಲಾಡಳಿತ ಹಾಗೂ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಧಾರವಾಡ ಜಿಲ್ಲೆಯಲ್ಲಿ ನಾಳೆ ನಡೆಯಲಿರುವ ಮತದಾನಕ್ಕೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಲಾಗಿದೆ.
ಈಗಾಗಲೇ ಹುಬ್ಬಳ್ಳಿ ನ್ಯೂ ಇಂಗ್ಲಿಷ್ ಸ್ಕೂಲ್ ಸೇರಿದಂತೆ ಎಲ್ಲ ಮತದಾನ ಕೇಂದ್ರದಲ್ಲಿ ಮತಪೆಟ್ಟಿಗೆ ಸಿದ್ದಪಡಿಸಿದ್ದು,ಮತದಾರರು ವಹಿಸಬೇಕಾದ ಮುಂಜಾಗ್ರತಾ ಕ್ರಮಗಳನ್ನು ಹಾಗೂ ಮತದಾನ ಕೇಂದ್ರದ ಆವರಣದಲ್ಲಿ ಯಾವುದೇ ಅವಘಡ ಸಂಭವಿಸದಂತೆ ಎಲ್ಲ ರೀತಿಯ ಸಿದ್ಧತೆ ಮಾಡಲಾಗಿದ್ದು,ಅಧಿಕಾರಿಗಳು ಪರಿಶೀಲನೆ ನಡೆಸಿದರು.
Kshetra Samachara
27/10/2020 09:34 pm