ಹುಬ್ಬಳ್ಳಿ : ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಮತದಾನ ಪ್ರಕ್ರಿಯೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ.ಉತ್ತರ ಕನ್ನಡ, ಹಾವೇರಿ, ಗದಗ, ಧಾರವಾಡ ಜಿಲ್ಲೆಯನ್ನ ಒಳಗೊಂಡ ಕ್ಷೇತ್ರದ ನಾಲ್ಕು ಜಿಲ್ಲೆಯ 146 ಮತಗಟ್ಟೆಗಳಲ್ಲಿ ಮತದಾನ ಆರಂಭವಾಗಿದೆ.ನಾಲ್ಕು ಜಿಲ್ಲೆಯಿಂದ 74268 ಮತದಾರರಿದ್ದು,ಬೆಳಿಗ್ಗೆಯಿಂದ ಮತದಾನ ಆರಂಭಗೊಂಡಿದೆ.ಪಶ್ಚಿಮ ಪದವೀಧರ ಚುನಾವಣೆಗೆ 11 ಅಭ್ಯರ್ಥಿ ಗಳು ಕಣದಲ್ಲಿದ್ದಾರೆ.ಇನ್ನೂ ಮತದಾರರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡುತ್ತಿರುವ ಆರೋಗ್ಯ ಇಲಾಖೆ ಸಿಬ್ಬಂದಿ.ಕೋವಿಡ್ ಹಿನ್ನೆಲೆ ಆರೋಗ್ಯ ಇಲಾಖೆ ಸಿಬ್ಬಂದಿಗಳಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.
Kshetra Samachara
28/10/2020 10:41 am