ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕೊರೊನಾ ಮುಂಜಾಗೃತೆಯೊಂದಿಗೆ ಮತದಾನ ಆರಂಭ

ಧಾರವಾಡ: ಕೊರೊನಾ ಮುಂಜಾಗೃತೆಯೊಂದಿಗೆ ಪ್ರಸಕ್ತ ವರ್ಷದ ಪಶ್ಚಿಮ ಪದವೀಧರರ ಚುನಾವಣೆಗೆ ಮತದಾನ ಆರಂಭವಾಗಿದೆ.

ಬೆಳಿಗ್ಗೆ 8 ಗಂಟೆಯಿಂದ ಮತದಾನ ಆರಂಭವಾಗಿದ್ದು, ಪದವೀಧರರು ಉತ್ಸಾಹದಿಂದಲೇ ಮತದಾನ ಮಾಡಲು ಬರುತ್ತಿದ್ದಾರೆ.

ಪ್ರತಿ ಮತಗಟ್ಟೆಯಲ್ಲೂ ಕೊರೊನಾ ಮುಂಜಾಗೃತೆ ಸಲುವಾಗಿ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ. ಮತದಾನ ಮಾಡಲು ಬರುವ ಹಾಗೂ ಮತಗಟ್ಟೆಯಲ್ಲಿರುವ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಧಾರವಾಡದ ಕೆಸಿಡಿಯಲ್ಲಿರುವ ಮತಗಟ್ಟೆಗೆ ಉಪವಿಭಾಗಾಧಿಕಾರಿ ಡಾ.ಗೋಪಾಲಕೃಷ್ಣ ಹಾಗೂ ತಹಶೀಲ್ದಾರ ಡಾ.ಸಂತೋಷ ಬಿರಾದಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಜಿಲ್ಲೆಯಾದ್ಯಂತ ಒಟ್ಟು 54 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದ್ದು, ಬೆಳಿಗ್ಗೆಯಿಂದಲೇ ಪದವೀಧರರು ಅತ್ಯಂತ ಉತ್ಸಾಹದಿಂದ ಮತದಾನ ಮಾಡಲು ಬರುತ್ತಿದ್ದಾರೆ. ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದ್ದು, ಕೊನೆಯ ಎರಡು ಗಂಟೆಯ ಅವಧಿಯಲ್ಲಿ ಕೊರೊನಾ ಸೋಂಕಿತರಿಗೆ ಮತದಾನ ಮಾಡಲು ಅವಕಾಶ ಮಾಡಿಕೊಡಲಾಗಿದೆ.

Edited By : Manjunath H D
Kshetra Samachara

Kshetra Samachara

28/10/2020 11:33 am

Cinque Terre

27.61 K

Cinque Terre

0

ಸಂಬಂಧಿತ ಸುದ್ದಿ