ಹುಬ್ಬಳ್ಳಿ: ಪಶ್ಚಿಮ ಪದವಿಧರ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಸಹೋದರ ಹಾಗೂ ಎಂಎಲ್ ಸಿ ಪ್ರದೀಪ್ ಶೆಟ್ಟರ್ ಹಾಗೂ ಜಗದೀಶ್ ಶೆಟ್ಟರ್ ಪುತ್ರ ಸಂಕಲ್ಪ ಶೆಟ್ಟರ್ ಮತದಾನ ಮಾಡಿದರು.ನಗರದ ಫಾತಿಮಾ ಸ್ಕೂಲ್ ನ ಮತಗಟ್ಟೆ ಸಂಖ್ಯೆ -36ರಲ್ಲಿ ಮತದಾನದ ಬಳಿಕ ಮಾತನಾಡಿದ ಜಗದೀಶ್ ಶೆಟ್ಟರ್, ಕೊರೊನಾದ ವೇಳೆಯೂ ಮತದಾರರು ಮತಗಟ್ಟೆ ಆಗಮಿಸಿ ಮತದಾನ ಮಾಡ್ತಾ ಇದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ನಾಲ್ಕು ಜಿಲ್ಲೆಗಳಲ್ಲೂ ಬಿಜೆಪಿ ಪರ ಅಲೆಯಿದೆ ಎಂದರು.
ಹುಬ್ಬಳ್ಳಿಯಲ್ಲಿ ನಿನ್ನೆ ರಾತ್ರಿ ಖಾಸಗಿ ಹೊಟೇಲ್ ನಲ್ಲಿ ಬಿಜೆಪಿ ನಾಯಕರ ಸಭೆ ವಿಚಾರ ನಡೆಸಿದ್ದೇವೆ. ನಿನ್ನೆ ರಾತ್ರಿ ಬೆಳಗಾವಿ ಹಾಗೂ ಮಸ್ಕಿ ಕ್ಷೇತ್ರದ ಮುಖಂಡರ ಸಭೆ ನಡೆಸಿದ್ದೇವೆ.ಬಾಲಚಂದ್ರ ಜಾರಕಿಹೊಳಿ, ಉಮೇಶ ಕತ್ತಿ. ರಮೇಶ ಕತ್ತಿ, ಲಕ್ಷ್ಮಣ ಸವದಿ ಭಾಗಿಯಾಗಿದ್ರು,
ನಳೀನಕುಮಾರ ಕಟೀಲ್ ನೇತೃತ್ವದಲ್ಲಿ ಸಭೆ ನಡೆಸಿದ್ದೇವೆ.
ಬೆಳಗಾವಿ ಲೋಕಸಭೆ ಚುನಾವಣೆ ಹಾಗೂ ಮಸ್ಕಿ ಕ್ಷೇತ್ರದ ಚುನಾವಣೆ ಮತ್ತು ಬೆಳಗಾವಿ ಡಿಸಿಸಿ ಬ್ಯಾಂಕ ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗಿದೆ.ಬೆಳಗಾವಿ ಲೋಕಸಭೆ ಅಭ್ಯರ್ಥಿ ಇನ್ನೂ ಅಂತಿಮ ಆಗಿಲ್ಲ. ಚುನಾವಣೆ ಘೋಷಣೆ ಆಗಿಲ್ಲ. ಕೆಲವೊಂದು ಸಮಸ್ಯೆ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದರು.ಪ್ರಕಾಶ ಹುಕ್ಕೇರಿ ಬಿಜೆಪಿ ಬೆಂಬಲ ವಿಚಾರಕ್ಕೆ ಪ್ರತಿಕ್ರಿಯೇ ನೀಡಿದ ಅವರು ಬೆಂಬಲ ಮಾಡೋದಕ್ಕೆ ನಮ್ಮ ಅಭ್ಯಂತರವಿಲ್ಲ. ಆದ್ರೆ ಅವರು ಬಿಜೆಪಿ ಸೇರ್ಪಡೆ ಬಗ್ಗೆ ಅವರು ಎಲ್ಲಿ ಬಹಿರಂಗವಾಗಿ ಹೇಳಿಲ್ಲ. ಆ ಬಗ್ಗೆ ಚರ್ಚೆಯೂ ನಡೆದಿಲ್ಲ ಎಂದರು.
Kshetra Samachara
28/10/2020 11:59 am