ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಇಲ್ಲ. ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ- ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಇಲ್ಲ. ಯಡಿಯೂರಪ್ಪನವರೇ, ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ‌ ಹೇಳಿದರು.

ನಗರದ ಫಾತಿಮಾ ಹೈಸ್ಕೈಲ್‌ನಲ್ಲಿ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಮತದಾನ ಮಾಡಿ‌ ಮಾತನಾಡಿದ ಅವರು, ಖಾಸಗಿ ಹೊಟೇಲ್ ನಲ್ಲಿ ನಿನ್ನೆ ಬೆಳಗಾವಿ ಡಿಸಿಸಿ ಬ್ಯಾಂಕ್ ಹಾಗೂ ಮಸ್ಕಿ ಚುನಾವಣೆ ಬಗ್ಗೆ ಬಿಜೆಪಿ ನಾಯಕರ ಸಭೆ ಮಾಡಿದ್ದೇವೆ.

ಮಸ್ಕಿ ಕ್ಷೇತ್ರದಲ್ಲಿ ಚುನಾವಣೆ ಬಗ್ಗೆ ಚರ್ಚೆ ನಡೆಸಿದ್ದೇವೆ. ಬೆಳಗಾವಿಯ ನಾಯಕರು ತಮ್ಮ ಬೆಂಬಲಿಗರನ್ನು ಡಿಸಿಸಿ ಬ್ಯಾಂಕ್ ಗೆ ಸ್ಪರ್ಧೆ ಮಾಡಿಸಿದ್ದಾರೆ.

ಹೀಗಾಗಿ ‌ಗೊಂದಲ ಸೃಷ್ಟಿಯಾಗಬಾರದು ಎಂಬ ನಿಟ್ಟಿನಲ್ಲಿ ಅವರೆಲ್ಲರೂ ಒಂದಾಗಿ ಚುನಾವಣೆ ಎದುರಿಸಬೇಕೆಂದು ತಿಳಿಸಿದ್ದೇವೆ ಎಂದರು.

ನಾಯಕತ್ವ ಬದಲಾವಣೆ ವಿಚಾರದ ಚರ್ಚೆ ನಡೆದಿಲ್ಲ. ಯಡಿಯೂರಪ್ಪನವರ ಬದಲಾವಣೆಯ ಪ್ರಶ್ನೆ ಇಲ್ಲ ಅಲ್ಲದೇ ಸಿಎಂ ಖುರ್ಚಿ ಖಾಲಿಯಿಲ್ಲ. ಬಿಎಸ್ ವೈ ಬದಲಾವಣೆ ಮಾಡೋ ಮಾತಿಲ್ಲ ಎಂದು ಹೇಳಿ ತೆರಳಿದರು.

Edited By : Nagesh Gaonkar
Kshetra Samachara

Kshetra Samachara

28/10/2020 02:31 pm

Cinque Terre

36.82 K

Cinque Terre

3

ಸಂಬಂಧಿತ ಸುದ್ದಿ