ಹುಬ್ಬಳ್ಳಿ: ನಿರ್ಮಲಾ ಸೀತಾರಾಮನ್ ಐದು ರೂಪಾಯಿಗೆ,ಕರಡಿ ಸಂಗಣ್ಣ ಒಂದು ರೂಪಾಯಿಗೆ ಹರಾಜು ಆಗಿದ್ದಾರೆ ಉಳಿದ ಸಂಸದರಿಗೆ ಯಾವುದೇ ಬೆಲೆ ಇಲ್ಲವಾಗಿದೆ ಎಂದು ಹುಬ್ಬಳ್ಳಿಯಲ್ಲಿ ಹೋರಾಟಗಾರ ವಾಟಾಳ್ ನಾಗರಾಜ ಹೇಳಿದರು.
ಉತ್ತರ ಕರ್ನಾಟಕ ಹಾಗೂ ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ಅತಿವೃಷ್ಠಿ,ಅನಾವೃಷ್ಠಿ ಹಿನ್ನೆಲೆಯಲ್ಲಿಂದು ಪ್ರತಿಭಟನೆ ನಡೆಸಿದ ಬಳಿಕ ಮಾತನಾಡಿದ ಅವರು,ಉತ್ತರ ಕರ್ನಾಟಕ ಭಾಗದಲ್ಲಿ ಅತಿವೃಷ್ಠಿ,ಅನಾವೃಷ್ಠಿ ಸಂಭವಿಸಿ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ.ಮಳೆಯಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದ್ದರೂ ಸಂಸದರು ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ.ಪ್ರಧಾನಿ ನರೇಂದ್ರ ಮೋದಿಯವರನ್ನ ಈ ಭಾಗಕ್ಕೆ ಕರೆತರುವಲ್ಲಿ ಎಲ್ಲ ಸಂಸದರು ವಿಫಲರಾಗಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.
Kshetra Samachara
29/10/2020 01:22 pm