ಹುಬ್ಬಳ್ಳಿ: ಭ್ರಷ್ಟಾಚಾರದ ಬಗ್ಗೆ ಡಿಕೆಶಿ ಅವರು ಮಾತನಾಡುವುದು ಹಾಸ್ಯಾಸ್ಪದವಾಗಿದೆ. ಭ್ರಷ್ಟಾಚಾರದಲ್ಲಿ ಭಾಗಿಯಾಗಿ ಅವರು ಬೇಲ್ ಮೇಲೆ ಹೊರಗಡೆ ಇದ್ದಾರೆ.ಮೊದಲು ಅದನ್ನು ಡಿಕೆಶಿ ಅರಿತುಕೊಳ್ಳಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಶಿರಾ ಮತ್ತು ಆರ್.ಆರ್ ನಗರ ಉಪಚುನಾವಣೆಯಲ್ಲಿ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿಕೆ ವಿಚಾರವಾಗಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು,ಇದು ಕಾಂಗ್ರೆಸ್ಸಿಗರ ದೊಡ್ಡ ಸಮಸ್ಯೆಯಾಗಿದ್ದು,ತಾವೇ ಭ್ರಷ್ಟಾಚಾರದಲ್ಲಿ ಸಿಲುಕಿಕೊಂಡಿದ್ದು ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ ಎಂದರು.
ಪುಲ್ವಾಮಾ ದಾಳಿ ಕುರಿತು ಪಾಕಿಸ್ತಾನ ಪಾರ್ಲಿಮೆಂಟ್ ನಲ್ಲಿ ಸಚಿವರೊಬ್ಬರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು,ಈ ಕುರಿತು ಅಲ್ಲಿನ ಮಂತ್ರಿಗಳೇ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.ಪುಲ್ವಾಮಾ ದಾಳಿ ಕುರಿತು ಇಲ್ಲಿನ ಕಾಂಗ್ರೆಸ್ ಪಕ್ಷದವರು ಸಾಕ್ಷಿ ಕೇಳಿದ್ದರು.
ಈ ಬಗ್ಗೆ ಪಾಕಿಸ್ತಾನದವರೇ ಅವರಿಗೆ ಉತ್ತರ ಕೊಟ್ಟಿದ್ದಾರೆ. ಪಾಕಿಸ್ತಾನ ಭಯೋತ್ಪಾದನಾ ಚಟುವಟಿಕೆ ಮಾಡುತ್ತಿದೆ ಅಂತ ಜಾಗತಿಕ ವೇದಿಕೆಯಲ್ಲಿ ನಾವು ಹೇಳುತ್ತಿದ್ದೇವು.ಈಗ ಅವರೇ ಬಹಿರಂಗವಾಗಿ ಭಯೋತ್ಪಾದನೆಗೆ ಪ್ರೋತ್ಸಾಹ ನೀಡೋದಾಗಿ ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದರು.
ಯುರೋಪ್ ರಾಷ್ಟದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ವಿಚಾರ ಹಿನ್ನೆಲೆಯಲ್ಲಿ ಮಾತನಾಡಿ,ಭಾರತ ದೇಶದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಯಾವುದೇ ಪ್ರಸ್ತಾವನೆ ಇಲ್ಲ.ಈಗಾಗಲೇ ಕೊರೋನಾ ನಿಯಂತ್ರಣಕ್ಕೆನಾವು ಸಕಲ ಸಿದ್ಧತೆಯಲ್ಲಿದ್ದೇವೆ.ಹೀಗಾಗಿ ನಮ್ಮದೇಶದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಅವಶ್ಯಕತೆ ಇಲ್ಲ ಎಂದರು.
Kshetra Samachara
30/10/2020 01:07 pm