ಹುಬ್ಬಳ್ಳಿ-ಮೋದಿ ಆಡಳಿತದಿಂದ ದೇಶ ಆರ್ಥಿಕವಾಗಿ ದಿವಾಳಿಯಾಗಿದೆ. ಇದನ್ನೆಲ್ಲ ಸುಧಾರಿಸಲು ಮನಮೋಹನ್ ಸಿಂಗ್ ಅವರಂತಹ ಆರ್ಥಿಕ ತಜ್ಞರು ಮತ್ತೆ ಅಧಿಕಾರಕ್ಕೆ ಬರಬೇಕಿದೆ ಎಂದು ಶಾಸಕ ಪ್ರಸಾದ್ಅಬ್ಬಯ್ಯ ಹೆಳಿದ್ದಾರೆ.
ಹಳೇ ಹುಬ್ಬಳ್ಳಿಯ ಇಂಡಿ ಪಂಪ್ ಬಳಿ ಹಮ್ಮಿಕೊಂಡಿದ್ದ ಒಂದು ದಿನದ ಸಾಂಕೇತಿಕ ಧರಣಿಯಲ್ಲಿ ಮಾತನಾಡಿದ ಅವರು ನಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ಅನೇಕ ಜನಪರ ಯೋಜನೆಗಳನ್ನು ಜಾರಿ ಮಾಡಿದೆ. ಆದ್ರೆ ಈಗಿನ ಸರ್ಕಾರಕ್ಕೆ ಅದು ಸಾಧ್ಯವಾಗುತ್ತಿಲ್ಲ. ಇದರಿಂದ ದೇಶ ಸಂಕಷ್ಟದಲ್ಲಿದೆ ಎಂದರು.
ಧರಣಿಯಲ್ಲಿ ಪಾಲ್ಗೊಂಡಿದ್ದ ಪಕ್ಷದ ಜಿಲ್ಲಾಧ್ಯಕ್ಷ ಅಲ್ತಾಫ ಹಳ್ಳೂರ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೆಣದ ಮೇಲೆ ಹಣ ಹೊಡೆಯುವ ಕೆಲಸ ಮಾಡುತ್ತಿವೆ. ಜನಸಾಮಾನ್ಯರ ಭಾವನೆಗಳೊಂದಿಗೆ ಚೆಲ್ಲಾಟವಾಡುವ ಕೆಲಸ ಮಾಡುತ್ತಿವೆ ಎಂದರು.
Kshetra Samachara
02/11/2020 11:39 am