ನವಲಗುಂದ : ನವಲಗುಂದ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಗೆ ಇನ್ನೇನು ಕೆಲವೇ ಘಂಟೆಗಳಷ್ಟೇ ಬಾಕಿ ಇದೆ. ಈ ಹಿನ್ನಲೆ ಮಂಗಳವಾರ ಹುಬ್ಬಳ್ಳಿಯ ಗೋಕುಲ ರಸ್ತೆಯ ಸಭಾಂಗಣದಲ್ಲಿ ಧಾರವಾಡ ಜಿಲ್ಲಾ ಜೆ.ಡಿ.ಎಸ್ ಸಭೆ ನಡೆಯಿತು.
ನವಲಗುಂದ ಮಾಜಿ ಶಾಸಕ ಎನ್.ಎಚ್.ಕೋನರಡ್ಡಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈಗಾಗಲೇ ಕಾಂಗ್ರೆಸ್ ಪಕ್ಷದ ಮುಖಂಡರ ಜೊತೆ ಸತತ ಸಂಪರ್ಕದಲ್ಲಿದ್ದು ನವಲಗುಂದ ಪುರಸಭೆಯಲ್ಲಿ ಜೆ.ಡಿ.ಎಸ್ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲು ನಿರ್ಣಯಿಸಲಾಯಿತು.
ಇನ್ನೂ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಜೆ.ಡಿ.ಎಸ್. ಅಧ್ಯಕ್ಷ ಬಿ.ಬಿ.ಗಂಗಾಧರಮಠ ಬಿ.ಜೆ.ಪಿ. ಜೊತೆ ಮೈತ್ರಿ ಬೇಡಾ ಎಂಬ ಜಿಲ್ಲಾಧ್ಯಕ್ಷ ಅನಿಲ ಕುಮಾರ ಪಾಟೀಲ ಅವರ ಹೇಳಿಕೆಯನ್ನು ಸ್ವಾಗತಿಸಿದರು. ಮತ್ತು ಅಂತಿಮವಾಗಿ ಕಾಂಗ್ರೆಸ್ ಪಕ್ಷದ ಜೊತೆ ಚರ್ಚಿಸಿ ನಿರ್ಧಾರ ಕೈಕೊಳ್ಳಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು...
Kshetra Samachara
03/11/2020 09:05 pm