ಧಾರವಾಡ: ಧಾರವಾಡದ ಸರ್.ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದಲ್ಲಿ ಮೂರು ವರ್ಷದ ಕಾನೂನು ಪದವಿ ಸ್ಥಗಿತಗೊಳಿಸಿದ್ದನ್ನು ಖಂಡಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್.ನೀರಲಕೇರಿ ಭೇಟಿ ನೀಡಿದರು.
ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದ ನಂತರ ಕಾಲೇಜಿನ ಡೀನ್ ಅವರೊಂದಿಗೂ ನೀರಲಕೇರಿ ಮಾತುಕತೆ ನಡೆಸಿದರು. ಈ ವೇಳೆ ಕಾಲೇಜಿನಲ್ಲಿ ಸಿಬ್ಬಂದಿ ಕೊರತೆ ಇದೆ. ಹೀಗಾಗಿ ಕೋರ್ಸ ಬಂದ್ ಮಾಡಬೇಕಾಗಿದೆ ಎಂಬ ಉತ್ತರ ಬಂದಿದೆ.
ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ನೀರಲಕೇರಿ, ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಅವರು ಮೊನ್ನೆ ತಾನೆ ಧಾರವಾಡಕ್ಕೆ ಬಂದಿದ್ದರು. ಆಗ ಈ ಸಮಸ್ಯೆ ಅವರ ಗಮನಕ್ಕೆ ಬರಲೇ ಇಲ್ಲವೇ ಎಂದು ಪ್ರಶ್ನಿಸಿದರು.
ಮೂರು ವರ್ಷದ ಕಾನೂನು ಪದವಿ ಪುನರಾರಂಭಿಸುವಂತೆ ಎಬಿವಿಪಿ ಸಂಘಟನೆ ಜೊತೆಗೂಡಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಸ್ಪಷ್ಟವಾದ ಪ್ರತಿಕ್ರಿಯೆ ಬರುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ವಿದ್ಯಾರ್ಥಿಗಳೂ ಎಚ್ಚರಿಕೆ ನೀಡಿದ್ದಾರೆ.
Kshetra Samachara
03/11/2020 10:18 pm