ಹುಬ್ಬಳ್ಳಿ: ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಲ್ಲಿ ವಿಶೇಷತೆ ಇಲ್ಲ. ಬೆಳಗಾವಿ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಲ್ಲಿ ಭೇಟಿಯಾಗಿದ್ದೆ. ಪಕ್ಷದ ಕೆಲ ಆಂತರಿಕ ವಿಚಾರಗಳನ್ನೂ ಚರ್ಚಿಸಿದ್ದೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಂಸತ್ ಸದಸ್ಯರಾಗಿ ಗೆದ್ದ ಮೇಲೆ ನಾನು ಮೋದಿ ಅವರನ್ನು ಭೇಟಿಯಾಗಿರಲಿಲ್ಲ. ಕೃತಜ್ಞತೆ ತಿಳಿಸಲೆಂದು ಮೋದಿ ಅವರನ್ನು ಭೇಟಿಯಾಗಿದ್ದೆ. ಐತಿಹಾಸಿಕ ಕ್ಷೇತ್ರಗಳಿಗೆ ಸಂಬಂಧಿಸಿದ ಪುಸ್ತಕವನ್ನು ಅವರಿಗೆ ಕೊಟ್ಟೆ. ಮನೆಯ ಹಿರಿಯ ಸದಸ್ಯರ ರೀತಿಯಲ್ಲಿ ನನ್ನನ್ನು ಆತ್ಮೀಯತೆಯಿಂದ ಕಂಡರು ಎಂದರು.
ಬೆಳಗಾವಿ ಕ್ಷೇತ್ರದ ಅಭಿವೃದ್ಧಿಗಾಗಿ ಹಲವು ಮನವಿಗಳನ್ನು ಕೊಟ್ಟಿದ್ದೇನೆ. ಬೆಂಗಳೂರು ಧಾರವಾಡ ವಂದೇ ಭಾರತ ರೈಲನ್ನು ಬೆಳಗಾವಿವರೆಗೂ ವಿಸ್ತರಿಸಲು ಕೇಳಿದ್ದೇನೆ. ಸವದತ್ತಿ ಎಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನ ಕೊಟ್ಟಿದ್ದಕ್ಕೆ ಕೃತಜ್ಞತೆ ಸಲ್ಲಿಸಿದ್ದೇನೆ. ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಚರ್ಚಿಸಲಾಗಿದೆ. ಅಲ್ಲಿ ನಡೆಸಿದ ಎಲ್ಲ ಚರ್ಚೆಗಳ ಬಗ್ಗೆ ಬಹಿರಂಗವಾಗಿ ಹೇಳಲು ಆಗಲ್ಲ ಎಂದು ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಹೇಳಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
11/01/2025 03:11 pm