ಹುಬ್ಬಳ್ಳಿ: ಹುಬ್ಬಳ್ಳಿಯ ಹೊರವಲಯದ ತಾರಿಹಾಳ ಕೈಗಾರಿಕ ಪ್ರದೇಶದಲ್ಲಿ ಭಾರಿ ಅಗ್ನಿ ಅವಘಡದ ಸಾವಿನ ಸಂಖ್ಯೆ ಮೂರಕ್ಕೆರಿದೆ. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಪುರುಷ ಸೇರಿದಂತೆ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಮೃತ ಕುಟುಂಬಸ್ಥರ ಆಕ್ರನಂದನ ಮುಗಿಲು ಮುಟ್ಟಿದ್ದು, ಅನಧಿಕೃತ ಫ್ಯಾಕ್ಟರಿ ಮಾಲೀಕನ ಮೇಲೆ ಸೂಕ್ತ ಕ್ರಮದ ಆಗ್ರಹ ಬಲವಾಗಿ ಕೇಳಿ ಬಂದಿದೆ. ಇನ್ನೂ ಮೃತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಸಹ ಘೋಷಣೆಯಾಗಿದೆ.
ಹೌದು.ಸ್ಪಾರ್ಕ್ ಕ್ಯಾಂಡಲ್ ಅಗ್ನಿದುರಂತದ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ. ಓರ್ವ ಪುರುಷ, ಇಬ್ಬರ ಮಹಿಳೆಯರು ಸೇರಿದಂತೆ ಮೂವರ ಸಾವಾಗಿದೆ. ಇನ್ನುಳಿದ ಐವರಿಗೆ ಚಿಕಿತ್ಸೆ ಮುಂದುವರಿದೆ. ಕಿಮ್ಸ್ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ ಮಾಡಿ ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಬರ್ತಡೇ ಸೇರಿದಂತೆ ಸಭೆ ಸಮಾರಂಭಗಳಲ್ಲಿ ಕೇಕ್ ಮೇಲೆ ಬೆಳಗಿಸುವ ಸ್ಪಾರ್ಕ್ ಕ್ಯಾಂಡಲ್ ಉತ್ಪಾದಿಸುವ ಫ್ಯಾಕ್ಟರಿಯಲ್ಲಿ ಉಂಟಾದ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಒಟ್ಟು 8 ಜನರಲ್ಲಿ ಮೂವರು ಸಾವಿನಪ್ಪಿದ್ದು, ಇನ್ನುಳಿದ ಐವರಿಗೆ ಕಿಮ್ಸ್ ನಲ್ಲಿ ಚಿಕಿತ್ಸೆ ಮುಂದುವರಿದಿದೆ.
ಬೆಂಕಿ ಅವಘಡ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಭೇಟಿ ನೀಡಿ ಪೊಲೀಸರಿಂದ ಘಟನೆ ಬಗ್ಗೆ ಮಾಹಿತಿ ಪಡೆದರು. ಬಳಿಕ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಗಾಯಗೊಂಡವರ ಚಿಕಿತ್ಸೆ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು. ಇದೇ ವೇಳೆ ಮೃತರ ಕುಟುಂಬಸ್ಥರು ಸಚಿವರನ್ನು ತರಾಟೆಗೆ ತೆಗೆದುಕೊಂಡರು. ಕುಟುಂಬಸ್ಥರನ್ನು ಸಮಾಧಾನಪಡಿಸಿದ ಸಚಿವರು, ದುರಂತದಲ್ಲಿ ಮೃತ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ಜೊತೆಗೆ ಮೃತರ ಮಕ್ಕಳ ಆರೈಕೆ ಹಿನ್ನೆಲೆ ಬಾಲವಿಕಾಸ ಯೋಜನೆಯಡಿ ಮೂರು ವರ್ಷ ಅನುದಾನ ಒದಗಿಸುವ ಭರವಸೆ ನೀಡಿದರು.
ಮೃತ ವಿಜಯಲಕ್ಷ್ಮಿ ಪತಿ ವೀರಭದ್ರ ದೂರಿನ ಆಧಾರದ ಮೇಲೆ IPC 286, 337, 338, 304, Explosive act 1908 ಅಡಿ ಕೇಸ್ ದಾಖಲಿಸಿರುವ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು,ಫ್ಯಾಕ್ಟರಿ ಮ್ಯಾನೇಜರ್ ಮಂಜುನಾಥ ಎಂಬುವವರನ್ನು ಬಂಧನ ಮಾಡಿದ್ದಾರೆ. ತಲೆ ಮರೆಸಿಕೊಂಡಿರುವ ಮಾಲೀಕ ಅಬ್ದುಲ್ಲ ಖಾದೀರ್ ಶೇಕ್‌ಗಾಗಿ ತೀವ್ರ ಹುಡುಕಾಟ ನಡೆದಿದ್ದು, ಈ ಕಾರ್ಯಚರಣೆಗೆ ಮೂರು ಪೊಲೀಸ್ ತಂಡಗಳು ರಚನೆಯಾಗಿವೆ. ಇನ್ನೂ ಮೃತರ ಕುಟುಂಬಸ್ಥರು ಸೇರಿ ಗಾಯಗಳು ಕುಟುಂಬಸ್ಥರು ಫ್ಯಾಕ್ಟರಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
Kshetra Samachara
25/07/2022 12:56 pm