ಧಾರವಾಡ: ಹುಬ್ಬಳ್ಳಿ, ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರ ಚಿಕ್ಕಪ್ಪ ಹಾಗೂ ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಅವರ ಸಹೋದರರೂ ಆಗಿದ್ದ ಶಿವಣ್ಣ ಬೆಲ್ಲದ ಅವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಧಾರವಾಡದ ಎಸ್‌ಪಿ ಕಚೇರಿ ಬಳಿಯ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಶಿವಣ್ಣ ಬೆಲ್ಲದ ಅವರು ತೀವ್ರವಾಗಿ ಗಾಯಗೊಂಡಿದ್ದರು. ನಿನ್ನೆ ರಾತ್ರಿಯೇ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಶಿವಣ್ಣ ಬೆಲ್ಲದ ಅವರು ಕೊನೆಯುಸಿರೆಳೆದಿದ್ದಾರೆ. ಶಿವಣ್ಣ ಬೆಲ್ಲದ ಅವರು ಪ್ರತಿಷ್ಠಿತ ಕರ್ನಾಟಕ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಅವರಿಗೆ 82 ವರ್ಷ ವಯಸ್ಸಾಗಿತ್ತು. ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ಧಾರವಾಡದ ಹೊಸಯಲ್ಲಾಪುರ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
06/10/2022 09:34 am