ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಯಡಿಯೂರಪ್ಪನವರೇ ಇಂತವರನ್ನೇಕೆ ಇಟ್ಟುಕೊಂಡಿದ್ದೀರಿ?

ಧಾರವಾಡ: ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಅಖಂಡ ಕರ್ನಾಟಕ ರೈತ ಸಂಘದ ಸದಸ್ಯರು ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.

ಎಪಿಎಂಸಿ ಹಾಗೂ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಪಂಜಾಬ್ ಹಾಗೂ ಹರಿಯಾಣ ರಾಜ್ಯದ ರೈತರು ಧರಣಿ ನಡೆಸುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರ ರೈತರ ಮೇಲೆ ಜಲಪಿರಂಗಿ ಹಾಗೂ ಟಿಯರ್ ಗ್ಯಾಸ್ ಸಿಡಿಸುವ ಕೆಲಸ ಮಾಡುತ್ತಿದೆ. ರೈತರ ಮೇಲೆ ದೌರ್ಜನ್ಯ ಎಸಗುತ್ತಿದೆ ಎಂದು ಹೋರಾಟಗಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಹೋರಾಟದ ನೇತೃತ್ವ ವಹಿಸಿದ್ದ ಬಾಬಾಗೌಡ ಪಾಟೀಲ ಮಾತನಾಡಿ, ಯಡಿಯೂರಪ್ಪನವರೇ ನಿಮಗೆ ರೈತ ಹೋರಾಟಗಾರ ಎಂದು ಒಂದು ಬ್ರ್ಯಾಂಡ್ ಇದೆ. ಅದನ್ನು ಉಳಿಸಿಕೊಳ್ಳಬೇಕಾದರೆ ಮೊದಲು ಸಚಿವ ಸಂಪುಟದಿಂದ ಬಿ.ಸಿ.ಪಾಟೀಲ್ ಅವರನ್ನು ಕಿತ್ತೊಗೆಯಿರಿ. ಬಿ.ಸಿ.ಪಾಟೀಲ ಅವರೇ ರೈತರು ಹೇಡಿತನದಿಂದ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ. ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೊಳಗಾದ ಒಬ್ಬರ ರೈತನ ಮನೆಗಾದರೂ ನೀವು ಭೇಟಿ ನೀಡಿ ನಿಮಗೆ ಗೊತ್ತಾಗುತ್ತದೆ ಎಂದು ಬಿ.ಸಿ.ಪಾಟೀಲ ವಿರುದ್ಧ ಬಾಬಾಗೌಡ ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.

Edited By : Nagesh Gaonkar
Kshetra Samachara

Kshetra Samachara

04/12/2020 12:56 pm

Cinque Terre

57.03 K

Cinque Terre

0

ಸಂಬಂಧಿತ ಸುದ್ದಿ