ಹುಬ್ಬಳ್ಳಿ: ಎಪಿಎಂಸಿ ಕಾಯಿದೆ ಹಾಗೂ ಭೂ ಸುಧಾರಣಾ ಕಾಯಿದೆ ತಿದ್ದುಪಡಿ ವಿರೋಧಿಸಿ ಕರೆ ನೀಡಿರುವ ಭಾರತ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ರೈತನೊಬ್ಬ ವಿನೂತನವಾಗಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿದ್ದು,ಎಲ್ಲರ ಗಮನ ಸೆಳೆಯುವಂತೆ ಮಾಡಿತು.
ಇಂದು ಭಾರತ್ ಬಂದ್ ಹಿನ್ನೆಲೆ ರೈತನಿಂದ ಚೆನ್ನಮ್ಮ ವೃತ್ತದಲ್ಲಿ ವಿನೂತನ ಪ್ರತಿಭಟನೆ ನಡೆಸಿದ್ದು,ಕೊರಳಿಗೆ ಹಗ್ಗಹಾಕಿಕೊಂಡು ರೈತ ಪ್ರತಿಭಟನೆ ನಡೆಸಿದ್ದಾನೆ. ಈ ಕೃಷಿ ಕಾಯ್ದೆಯನ್ನು ಕೈ ಬಿಡಬೇಕೆಂದು ರೈತರಿಂದ ಒತ್ತಾಯಿಸಿ ವಿನೂತನ ಪ್ರತಿಭಟನೆ ನಡೆಸಿದರು.
Kshetra Samachara
08/12/2020 01:35 pm