ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಬಿಜೆಪಿಯ ಗೂಂಢಾಗಳಿಗೆ ಧಿಕ್ಕಾರಾ..

ಧಾರವಾಡ: ದೆಹಲಿಯಲ್ಲಿ ರೈತರು ನಡೆಸಿದ ಹೋರಾಟವನ್ನು ಬಿಜೆಪಿ ಸರ್ಕಾರ ದಿಕ್ಕು ತಪ್ಪಿಸಿದೆ ಎಂದು ಆರೋಪಿಸಿ ಎಡಪಕ್ಷಗಳು ಹಾಗೂ ರೈತ ಸಂಘಟನೆಗಳ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ದೆಹಲಿಯಲ್ಲಿ ರೈತರು ನಡೆಸುತ್ತಿದ್ದ ಶಾಂತಿಯುತ ಪ್ರತಿಭಟನೆಯ ದಿಕ್ಕನ್ನು ಬಿಜೆಪಿ ಸರ್ಕಾರವೇ ತಪ್ಪಿಸಿದೆ. ಆ ಮೂಲಕ ಬಿಜೆಪಿ ಸರ್ಕಾರ ಗೂಂಢಾಗಳನ್ನು ಕರೆದುಕೊಂಡು ಬಂದು ಆ ಪ್ರತಿಭಟನೆಯಲ್ಲಿ ತೊಡಗಿಸಿ ರೈತರ ಹೆಸರಿಗೆ ಕಳಂಕ ತಂದಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಅಲ್ಲಿನ ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿಯೇ ದಂಗೆ ಎಬ್ಬಿಸಿ ಅದನ್ನು ರೈತರ ತಲೆಗೆ ಕಟ್ಟಿದೆ. ದೆಹಲಿ ರೈತರ ಹೋರಾಟಕ್ಕೆ ನಮ್ಮ ಬೆಂಬಲ ಇದ್ದು, ನಿರಂತರವಾಗಿ ಹೋರಾಟ ಮಾಡಲಾಗುವುದು.

ಸರ್ಕಾರಗಳು ಎಪಿಎಂಸಿ ಹಾಗೂ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Edited By : Nagesh Gaonkar
Kshetra Samachara

Kshetra Samachara

30/01/2021 01:06 pm

Cinque Terre

18.51 K

Cinque Terre

0

ಸಂಬಂಧಿತ ಸುದ್ದಿ