ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಕಳಸಾ ಬಂಡೂರಿ ರೈತರು

ಹುಬ್ಬಳ್ಳಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತರಿಗೆ ಮಾರಕವಾಗಿರುವ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ, ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿಂದು ರೈಲ್ ರೋಕೋ ಚಳುವಳಿಯನ್ನು ಮಾಡುವ ಮೂಲಕ ರೈತರು ಪ್ರತಿಭಟನೆ ಮಾಡಿದರು.

ದೇಶಾದ್ಯಂತ ರೈಲ್ ರೋಕೋ ಚಳುವಳಿಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ, ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಆವರಣದಲ್ಲಿಂದು ಕರ್ನಾಟಕ ಕಳಸಾ ಬಂಡೂರಿ ರೈತರ ಹೋರಾಟ ಸಮಿತಿ, ಹಾಗೂ ಇತರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ರೈತರು ಪ್ರತಿಭಟನೆಗೆ ಇಳಿದು ಕೇಂದ್ರ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದ್ದು, ರೈತರಿಗೆ ಮಾರಕವಾಗಿರುವ ವಿದ್ಯುತ್ ಕಾಯ್ದೆ, ಎಪಿಎಂಸಿ ಕಾಯ್ದೆಗಳನ್ನು ಜಾರಿಗೆ ತಂದಿದ್ದು, ರೈತರು ಅಕ್ಷರಶಃ ನಲುಗಿ ಹೋಗುವಂತಾಗಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದ್ದು, ರೈತರಿಗೆ ಅನ್ಯಾಯ ಎಸುಗುತ್ತಿದೆ.

ದೆಹಲಿಯಲ್ಲಿ ರೈತರು ನಿರಂತರವಾಗಿ ಪ್ರತಿಭಟನೆ ಮಾಡುತ್ತಿದ್ದು, ಆದರೆ ಪ್ರಧಾನಮಂತ್ರಿ ಅವರು ಜಾನಮೌನ ವಹಿಸಿದ್ದು ಖಂಡನೀಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು...

Edited By : Manjunath H D
Kshetra Samachara

Kshetra Samachara

18/02/2021 12:47 pm

Cinque Terre

25.96 K

Cinque Terre

5

ಸಂಬಂಧಿತ ಸುದ್ದಿ