ಕುಂದಗೋಳ : ರೈತರು ಬೆಳೆದ ಬೆಳೆಗೆ ಯೋಗ್ಯ ಬೆಲೆ ಸಿಗಬೇಕು ಅಂದಾಗ ಮಾತ್ರ ರೈತರು ಹಾಗೂ ಅವರ ಕುಟುಂಬಕ್ಕೆ ನೆಮ್ಮದಿ ಈ ಕಾರಣದಿಂದ ಸರ್ಕಾರವೇ ಬೆಂಬಲ ರೈತ ಬೆಳೆದ ಕಡಲೆ ಬೆಳೆಗೆ ಬೆಂಬಲ ಬೆಲೆ ನೀಡಿ ಖರೀದಿ ಮಾಡುತ್ತಿದೆ. ಇದರ ಪ್ರಯೋಜನವನ್ನು ಕುಂದಗೋಳ ತಾಲೂಕಿನ ಪ್ರತಿ ಹಳ್ಳಿಯ ರೈತರು ಪಡೆದುಕೊಳ್ಳಿ ಎಂದು ಶಾಸಕಿ ಕುಸುಮಾವತಿ ಶಿವಳ್ಳಿ ಹೇಳಿದರು.
ಅವರು ಕುಂದಗೋಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ನಡೆದ ಕಡಲೆಕಾಳು ಖರೀದಿ ಕೇಂದ್ರ ಉದ್ಘಾಟನೆಯನ್ನು ರಿಬ್ಬನ್ ಕತ್ತರಿಸುವ ಮೂಲಕ ನೆರವೇರಿಸಿ ಮಾತನಾಡಿದರು.
ಈ ವೇಳೆ ಮಾಜಿ ಶಾಸಕ ಎಸ್.ಐ.ಚಿಕ್ಕನಗೌಡರ ಮಾತನಾಡಿ ಯೋಗ್ಯ ಬೆಳೆಗೆ ಯೋಗ್ಯ ಬೆಲೆ ಸಿಕ್ಕಿದೆ ಇದರ ಪ್ರಯೋಜನವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಎಮ್.ಆರ್.ಪಾಟೀಲ, ಜಿಲ್ಲಾ ಪಂಚಾಯತ್ ಸದಸ್ಯ ಉಮೇಶ್ ಹೆಬಸೂರು, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಸುರೇಶ್ ಗಂಗಾಯಿ, ಬಿಜೆಪಿ ಮುಖಂಡ ದಾನಪ್ಪ ಗಂಗಾಯಿ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಕಾರ್ಯದರ್ಶಿ ಎಮ್.ಎಸ್.ಹಾತಲಗೇರಿ ಹಾಗೂ ಕುಂದಗೋಳ ತಾಲೂಕಿನ ರೈತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
Kshetra Samachara
27/02/2021 09:40 am