ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೈತರ ಸಮಸ್ಯೆಗೆ ಸಮಗ್ರ ಕೃಷಿ ಪದ್ಧತಿ ಅಳವಡಿಕೆ ಪರಿಹಾರವಾಗಿದೆ: ಬಿ.ಸಿ.ಪಾಟೀಲ

ಧಾರವಾಡ: ರೈತರು ತಮ್ಮ ದಿನನಿತ್ಯದ ಕೃಷಿ ಚಟುವಟಿಕೆಯಲ್ಲಿ ಕೃಷಿಗೆ ಪೂರಕವಾದ ಇತರೆ ಚಟುವಟಿಕೆಗಳನ್ನು ಅಳವಡಿಸಿಕೊಳ್ಳಬೇಕು. ಕೃಷಿಯಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವುದು ಇಂದಿನ ರೈತರ ಸಮಸ್ಯೆಗಳಿಗೆ ಪರಿಹಾರವಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ಧಾರವಾಡದ ರಾಯಾಪುರದಲ್ಲಿರುವ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿರಿಧಾನ್ಯ ಸಂಸ್ಕರಣೆ ಘಟಕಕ್ಕೆ ಚಾಲನೆ ನೀಡಿ, ಸಿರಿಧಾನ್ಯ ಬೆಳಗಾರರ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಸುಮಾರು 62 ಸಾವಿರ ಹೆಕ್ಟೆರ್ ಪ್ರದೇಶದಲ್ಲಿ ಸಿರಿಧಾನ್ಯವನ್ನು ಬೆಳೆಯಲಾಗುತ್ತಿದೆ. ಸುಮಾರು 42 ಮೇಟ್ರಿಕ್ ಟನ್ ಸಿರಿಧಾನ್ಯವನ್ನು ಪ್ರತಿ ವರ್ಷ ಉತ್ಪಾದಿಸಲಾಗುತ್ತಿದೆ. ರಾಜ್ಯ ಸರ್ಕಾರವು ಕಳೆದ ಸಾಲಿನಿಂದ ರೈತ ಸಿರಿಯೋಜನೆಯನ್ನು ಆರಂಭಿಸಿ ಸಿರಿಧಾನ್ಯ ಬೆಳೆಯುವ ರೈತರನ್ನು ಪ್ರೋತ್ಸಾಹಧನ ನೀಡಿ, ಬೆಂಬಲಿಸಲಾಗುತ್ತಿದೆ ಮತ್ತು ಸಿರಿಧಾನ್ಯ ಉತ್ಪಾದನಾ ಕ್ಷೇತ್ರವೂ ವಿಸ್ತಾರಗೊಳ್ಳುವಂತೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ರೈತರನ್ನು ಆರ್ಥಿಕವಾಗಿ ಸದೃಢಗೊಳ್ಳಿಸಲು ಮತ್ತು ದಲ್ಲಾಳಿಗಳಿಂದ ಶೋಷಣೆ ತಪ್ಪಿಸಲು ಅವರು ಉತ್ಪಾದಿಸಿದ ಉತ್ಪನ್ನಗಳನ್ನು ರೈತರೆ ಸಂಸ್ಕರಿಸಿ, ಪ್ಯಾಕಿಂಗ್ ಮಾಡಿ, ಗ್ರಾಹಕರಿಗೆ ನೇರವಾಗಿ ತಲುಪಿಸಲು ಅನುಕೂಲವಾಗುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿವಿಧ ಯೋಜನೆಗಳ ಮೂಲಕ ಆರ್ಥಿಕ ನೇರವನ್ನು ನೀಡುತ್ತಿವೆ ಎಂದರು.

ಕೇಂದ್ರ ಸರ್ಕಾರವು ಆತ್ಮ ನಿರ್ಭರ ಯೋಜನೆಯ ಮೂಲಕ ಪ್ರಸಕ್ತ ಸಾಲಿನಲ್ಲಿ ಕೃಷಿ ಮೂಲ ಸೌಕರ್ಯಗಳಿಗಾಗಿ 1 ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ ಮತ್ತು ಇದರಲ್ಲಿ 10 ಸಾವಿರ ಕೋಟಿ ರೂಪಾಯಿಗಳನ್ನು ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಪೂರೈಸಲಿದೆ. ರೈತರು ಮತ್ತು ರೈತೋತ್ಪಾದಕ ಕಂಪೆನಿಗಳು ಆಹಾರ ಸಂಸ್ಕರಣೆಯ ಘಟಕಗಳನ್ನು ಆರಂಭಿಸುವ ಮೂಲಕ ರೈತರ ಉತ್ಪನ್ನಗಳಿಗೆ ಉತ್ತಮ ಬೆಲೆ ಸಿಗುವಂತೆ ಮತ್ತು ಹೆಚ್ಚಿನ ಲಾಭ ದೊರಕುವಂತೆ ಮಾಡಬೇಕೆಂದು ಸಚಿವರು ಹೇಳಿದರು.

ಕೃಷಿ ಇಲಾಖೆಯಿಂದ “ರೈತರೊಂದಿಗೊಂದು ದಿನ” ಕಾರ್ಯಕ್ರಮದ ಮೂಲಕ ಸರ್ಕಾರದ ಯೋಜನೆಗಳನ್ನು ರೈತರ ಮನೆ, ಜಮೀನುಗಳಿಗೆ ಮುಟ್ಟಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಸ್ವತಃ ರೈತರೊಂದಿಗೆ ನೇರವಾಗಿ ಬೆರೆತು ಅವರ ಕಷ್ಟ, ಸುಖ, ಸಾಧನೆ ಮತ್ತು ಬೆಡಿಕೆಗಳ ಕುರಿತು ಸಂವಾದ ಮಾಡುತ್ತಿದ್ದೇನೆ ಎಂದು ಸಚಿವರು ತಿಳಿಸಿದರು.

ರಾಸಾಯನಿಕ ಬಳಕೆಯನ್ನು ಮಿತಿಗೊಳ್ಳಿಸಿ ಸಾವಯವ ಕೃಷಿಯನ್ನು ಉತ್ತೆಜಿಸುವ ಅಗತ್ಯವಿದೆ. ರೈತ ಸಂತುಷ್ಠನಾದರೆ ಮಾತ್ರ ದೇಶ ಸಮುೃದ್ಧವಾಗಲು ಸಾದ್ಯವಾಗುತ್ತದೆ. ರೈತರ ಹಿತಕಾಯಲು ಸಿದ್ಧನಾಗಿದ್ದು ರೈತ ಉಪಯುಕ್ತವಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಬದ್ಧನಾಗಿದ್ದೆನೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಸರ್ಕಾರಕ್ಕೆ ಮಾದರಿಯಾಗಿದೆ ಎಂದು ಸಚಿವರು ಹೇಳಿದರು.

ಕಾರ್ಯಕ್ರಮದಲ್ಲಿ ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಎಂ.ಬಿ.ಚಟ್ಟಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವೈಧ್ಯಕೀಯ ವಿಶ್ವವಿದ್ಯಾನಿಲಯದ ಕುಲಪತಿ ಡಾ. ನಿರಂಜನ ಕುಮಾರ ಮಾತನಾಡಿದರು.

ವೇದಿಕೆಯಲ್ಲಿ ಪದ್ಮಲತಾ ನಿರಂಜನಕುಮಾರ, ನಬಾರ್ಡ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಮಯೂರ ಕಾಂಬ್ಳೆ ಇದ್ದರು.

Edited By : Vijay Kumar
Kshetra Samachara

Kshetra Samachara

27/02/2021 10:26 pm

Cinque Terre

18.4 K

Cinque Terre

0

ಸಂಬಂಧಿತ ಸುದ್ದಿ