ಹುಬ್ಬಳ್ಳಿ: ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೊರ್ಚಾ ಕರೆ ನೀಡಿರುವ ಭಾರತ ಬಂದ್‌ಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಹಲವು ಸಂಘಟನೆಗಳು ಬೆಂಬಲ ಸೂಚಿಸಿವೆ.
ನಾಳೆ ಭಾರತ ಬಂದ್‌ಗೆ ರೈತ ಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ದಲಿತ ಪರ ಸಂಘಟನೆಗಳು, ಮಹಿಳಾ ಪರ ಸಂಘಟನೆಗಳು, ಆಟೋರಿಕ್ಷಾ ಚಾಲಕರ ಸಂಘಟನೆಗಳು ಹಾಗೂ ಕಾರ್ಮಿಕರ ಪರ ಸಂಘಟನೆಗಳಿಂದ ಬೆಂಬಲ ಸೂಚಿಸಿವೆ.
ಇಂದಿರಾ ಗ್ಲಾಸ್ ಗೌಸ್‌ನಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದು, ಚೆನ್ನಮ್ಮ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಿವೆ. ಆದರೆ ವಾಣಿಜ್ಯ ನಗರಿ ಹುಬ್ಬಳ್ಳಿ ಸೇರಿದಂತೆ ಧಾರವಾಡ ಜಿಲ್ಲೆಯಲ್ಲಿ ಯಾವುದೇ ಬಂದ್ ಇಲ್ಲ. ಕೇವಲ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲಿರುವ ಸಂಘಟನೆಗಳು ತೀರ್ಮಾನಿಸಿವೆ.
Kshetra Samachara
26/09/2021 11:45 am