ಹುಬ್ಬಳ್ಳಿ: ಕೃಷಿ ಕಾನೂನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ರೈತ ಸಂಘಟನೆ ಹಾಗೂ ವಿವಿಧ ಕಾರ್ಮಿಕ ಸಂಘಟನೆ ಹಾಗೂ ರೈಲ್ವೆ ಪೊಲೀಸ್ ಸಿಬ್ಬಂದಿ ಮಧ್ಯೆ ಮಾತಿನ ಚಕಮಕಿ ನಡೆದಿದೆ.
ಹುಬ್ಬಳ್ಳಿಯ ರೈಲು ನಿಲ್ದಾಣದಲ್ಲಿ ರೈAಲು ಸಂಚಾರ ತಡೆಯಲು ಯತ್ನಿಸುತ್ತಿದ್ದ ವೇಳೆಯಲ್ಲಿ ರೈಲು ಸಂಚಾರ ತಡೆದು ಪ್ರತಿಭಟನೆಗೆ ಮುಂದಾದ ಪ್ರತಿಭಟನಾಕಾರರನ್ನು ಆರ್ ಪಿಎಫ್ ಪೊಲೀಸರು ತಡೆದಿದ್ದಾರೆ. ಇದೇ ವೇಳೆ ಆರ್ ಪಿ ಎಫ್ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ.
ಕೇಂದ್ರದ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕೆಲಕಾಲ ಪೊಲೀಸರೊಂದಿಗೆ ರೈತರು ವಾಗ್ವಾದಕ್ಕೆ ಇಳಿದಿದ್ದಾರೆ.
Kshetra Samachara
18/10/2021 02:37 pm