ಅಣ್ಣಿಗೇರಿ: ಸರ್ಕಾರದ ಬೆಂಬಲ ಬೆಲೆಯ ಕಡಲೆ ಖರೀದಿ ಕೇಂದ್ರವನ್ನು ತೆರೆಯುವಂತೆ ಜೆಡಿಎಸ್ ಪಕ್ಷ ಹಾಗೂ ಪಕ್ಷಾತೀತವಾಗಿ ತಾಲೂಕು ದಂಡಾಧಿಕಾರಿ ಮಂಜುನಾಥ ಅಮಾಸೆ ಅವರಿಗೆ ಮನವಿ ಪತ್ರ ಸಲ್ಲಿಸಲಾಗಿತ್ತು. ಅಷ್ಟೇ ಅಲ್ಲದೆ ಫೆಬ್ರವರಿ 13ರ ಒಳಗಾಗಿ ಖರೀದಿ ಕೇಂದ್ರ ಪ್ರಾರಂಭವಾಗದೇ ಹೋದರೆ ಆಮರಣ ಉಪವಾಸ ಸತ್ಯಾಗ್ರಹ ಮಾಡುವುದಾಗಿ ತಿಳಿಸಲಾಗಿತ್ತು. ಇಷ್ಟಾದರೂ ಯಾವುದೇ ಖರೀದಿ ಕೇಂದ್ರ ಪ್ರಾರಂಭವಾಗದ ಹಿನ್ನೆಲೆಯಲ್ಲಿ ಜೆಡಿಎಸ್‌ನ ಧಾರವಾಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಂಗಡಿ ಅವರ ನೇತೃತ್ವದಲ್ಲಿ ಆಮರಣ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭವಾಗಿದೆ.
ಪಟ್ಟಣದ ಬಸ್ ನಿಲ್ದಾಣದ ಪಕ್ಕದ ಜಾಗದಲ್ಲಿ ಜೆಡಿಎಸ್ ವತಿಯಿಂದ ಇಂದು (ಸೋಮವಾರ) ಬೆಳಿಗ್ಗೆ 10 ಗಂಟೆಯಿಂದಲೇ ಆಮರಣ ಉಪವಾಸ ಸತ್ಯಾಗ್ರಹವನ್ನು ಆರಂಭಿಸಲಾಗಿದೆ. ಇನ್ನು ಈ ಹೋರಾಟಕ್ಕೆ ರೈತ ಹೋರಾಟಗಾರರು ಹಲವಾರು ಪಕ್ಷದ ಮುಖಂಡರು ಕಾರ್ಯಕರ್ತರು ರೈತರು ಉಪಸ್ಥಿತರಿದ್ದರು.
Kshetra Samachara
14/02/2022 07:28 pm